Romans 1:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪಾಪಗಳಿಂದ ತುಂಬಿಹೋಗಿದ್ದ ಅವರು ದುಷ್ಕೃತ್ಯಗಳನ್ನೇ ಮಾಡಬಯಸಿದರು. ಆದ್ದರಿಂದ ಪಾಪಮಾರ್ಗದಲ್ಲೇ ಹೋಗಲೆಂದು ದೇವರು ಅವರನ್ನು ಬಿಟ್ಟುಬಿಟ್ಟನು. ಅದರಿಂದಾಗಿ ಅವರು ತಮ್ಮತಮ್ಮಲ್ಲೇ ತಮ್ಮ ದೇಹಗಳಿಂದ ಲೈಂಗಿಕ ಪಾಪಗಳನ್ನು ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಅವರು ಮನಸ್ಸಿನ ದುರಾಶೆಗಳಂತೆ ನಡೆದು ತಮ್ಮ ತಮ್ಮ ದೇಹಗಳನ್ನು ತಮ್ಮೊಳಗೆ ಮಾನಹೀನಮಾಡಿಕೊಳ್ಳಲಿ ಎಂದು ದೇವರು ಅವರನ್ನು ಹೊಲಸಾದ ಕೆಟ್ಟ ನಡತೆಗಳಿಗೆ ಒಪ್ಪಿಸಿಬಿಟ್ಟನು.
Kannada BSI Bible 2016
ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಅವರು ಮನಸ್ಸಿನ ದುರಾಶೆಗಳಂತೆ ನಡೆದು ತಮ್ಮ ದೇಹಗಳನ್ನು ಮಾನಹೀನಮಾಡಿಕೊಳ್ಳಲಿ ಎಂದು ದೇವರು ಅವರನ್ನು ಹೊಲಸಾದ ನಡತೆಗೆ ಒಪ್ಪಿಸಿದನು.
Kannada Bible (KNCL) BSI 2016
ಆದುದರಿಂದ, ಮಾನವರು ಮನಸ್ಸಿನ ಆಶಾಪಾಶಗಳಿಗೆ ಬಲಿಯಾಗಿ ತಮ್ಮ ದೇಹಗಳಿಂದ ತಮ್ಮತಮ್ಮಲ್ಲೇ ಅಶ್ಲೀಲಕೃತ್ಯಗಳೆಸಗಲೆಂದು ದೇವರು ಅವರನ್ನು ಅಶುದ್ಧ ನಡತೆಗೆ ಬಿಟ್ಟುಬಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ಅವರು ತಮ್ಮ ಹೃದಯದ ದುರಾಶೆಗಳಂತೆ ನಡೆದು ತಮ್ಮ ದೇಹಗಳನ್ನು ಮಲಿನ ಮಾಡಿಕೊಳ್ಳಲಿ ಎಂದು ದೇವರು ಅವರನ್ನು ಅಶುದ್ಧತೆಗೆ ಒಪ್ಪಿಸಿಬಿಟ್ಟರು.