Romans 1:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ದೇವರ ಸತ್ಯವನ್ನು ತೊರೆದು ಸುಳ್ಳನ್ನು ಹಿಡಿದುಕೊಂಡರು; ಸೃಷ್ಟಿಸಲ್ಪಟ್ಟ ವಸ್ತುಗಳನ್ನು ಆರಾಧಿಸಿದರು; ಅವುಗಳ ಸೇವೆ ಮಾಡಿದರು. ಆದರೆ ಆ ವಸ್ತುಗಳನ್ನು ಸೃಷ್ಟಿಸಿದ ದೇವರನ್ನು ಅವರು ಆರಾಧಿಸಲಿಲ್ಲ; ಆತನ ಸೇವೆ ಮಾಡಲಿಲ್ಲ. ದೇವರಿಗೇ ನಿರಂತರ ಸ್ತುತಿಸ್ತೋತ್ರ ಸಲ್ಲಬೇಕು. ಆಮೆನ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಸತ್ಯ ದೇವರನ್ನು ಬಿಟ್ಟು ಅಸತ್ಯವಾದದ್ದನ್ನು ಹಿಡಿದುಕೊಂಡು ಸೃಷ್ಟಿ ಕರ್ತನನ್ನು ಆರಾಧಿಸದೆ ಸೃಷ್ಟಿಯನ್ನೇ ಪೂಜಿಸಿ ಆರಾಧಿಸುವವರಾದರು. ಆದರೆ, ಆತನೇ ನಿರಂತರ ಸ್ತುತಿ ಹೊಂದತಕ್ಕವನು, ಆಮೆನ್.
Kannada BSI Bible 2016
ಅವರು ದೇವರ ವಿಷಯವಾದ ಸತ್ಯವನ್ನು ಸುಳ್ಳಿಗೆ ಬದಲಾಯಿಸಿ ಸೃಷ್ಟಿಕರ್ತನಿಗಿಂತ ಹೆಚ್ಚಾಗಿ ಸೃಷ್ಟಿಯನ್ನೇ ಆರಾಧಿಸಿ ಸೇವಿಸಿದರು; ಆತನು (ಸೃಷ್ಟಿಕರ್ತನು) ಎಂದೆಂದಿಗೂ ಸ್ತುತಿ ಹೊಂದತಕ್ಕವನು. ಆಮೆನ್‌.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಸತ್ಯದೇವರನ್ನು ಬಿಟ್ಟು ಅಸತ್ಯವಾದದ್ದನ್ನು ಹಿಡಿದುಕೊಂಡು ಸೃಷ್ಟಿಕರ್ತನನ್ನು ಪೂಜಿಸದೆ ಸೃಷ್ಟಿವಸ್ತುಗಳನ್ನೇ ಪೂಜಿಸಿ ಸೇವಿಸುವವರಾದರು. ಸೃಷ್ಟಿಕರ್ತನೊಬ್ಬನೇ ನಿರಂತರ ಸ್ತುತಿಹೊಂದತಕ್ಕವನು. ಆಮೆನ್.
Kannada Bible (KNCL) BSI 2016
ಅವರು ದೇವರ ಸತ್ಯವನ್ನು ಬಿಟ್ಟು ಅಸತ್ಯವಾದುದನ್ನು ಅಂಗೀಕರಿಸಿದರು; ಸೃಷ್ಟಿಕರ್ತನನ್ನು ಆರಾಧಿಸದೆ, ಸೃಷ್ಟಿಯಾದ ವಸ್ತುಗಳನ್ನೇ ಆರಾಧಿಸಿ, ಸೇವೆಸಲ್ಲಿಸಿದರು. ಸರ್ವಕಾಲಕ್ಕೂ ಸೃಷ್ಟಿಕರ್ತರೊಬ್ಬರಿಗೇ ಸ್ತುತಿಸ್ತೋತ್ರ ಸಲ್ಲತಕ್ಕದ್ದು. ಆಮೆನ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ದೇವರ ಸತ್ಯವನ್ನು ಸುಳ್ಳನ್ನಾಗಿ ಬದಲಿಸಿಕೊಂಡು, ಸೃಷ್ಟಿಕರ್ತನನ್ನು ಆರಾಧಿಸದೆ ಸೃಷ್ಟಿವಸ್ತುಗಳನ್ನೇ ಪೂಜಿಸಿ ಸೇವೆ ಸಲ್ಲಿಸುವವರಾದರು. ಸೃಷ್ಟಿ ಕರ್ತನೇ ನಿರಂತರವಾಗಿ ಸ್ತುತಿ ಹೊಂದತಕ್ಕವರು. ಆಮೆನ್.