Romans 1:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಆ ರೀತಿ ವರ್ತಿಸಿದ್ದರಿಂದಲೇ, ದೇವರು ಅವರನ್ನು ನಾಚಿಕೆಕರವಾದ ಕಾಮಾಭಿಲಾಷೆಗೆ ಬಿಟ್ಟುಕೊಟ್ಟನು. ಅವರ ಸ್ತ್ರೀಯರು ಪುರಷರೊಂದಿಗೆ ಪಡೆಯುತ್ತಿದ್ದ ಸಹಜವಾದ ಲೈಂಗಿಕ ಸಂಪರ್ಕವನ್ನು ನಿಲ್ಲಿಸಿ, ಸಲಿಂಗಕಾಮಿಗಳಾದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಇಂಥದ್ದನ್ನು ಮಾಡಿದ್ದರಿಂದ ದೇವರು ಅವರನ್ನು ಕೇವಲ ಲಜ್ಜಾಸ್ಪದವಾದ ಕಾಮಾಭಿಲಾಷೆಗಳಿಗೆ ಒಪ್ಪಿಸಿಬಿಟ್ಟನು. ಅವರ ಹೆಂಗಸರು ಸ್ವಾಭಾವಿಕವಾದ ಭೋಗವನ್ನು ತೊರೆದು ಸ್ವಭಾವಕ್ಕೆ ವಿರುದ್ಧವಾದ ಕಾಮಕೃತ್ಯಗಳನ್ನು ಮಾಡಿದರು.
Kannada BSI Bible 2016
ಈ ಕಾರಣದಿಂದ ದೇವರು ಅವರನ್ನು ತುಚ್ಛ ವಾದ ಮನೋಭಾವಗಳಿಗೆ ಒಪ್ಪಿಸಿಬಿಟ್ಟನು. ಹೇಗೆಂದರೆ ಅವರ ಹೆಂಗಸರು ಸಹ ಸ್ವಾಭಾವಿಕವಾದ ಭೋಗ ವನ್ನು ಸ್ವಭಾವ ವಿರುದ್ಧವಾದ ಭೋಗಕ್ಕೆ ಮಾರ್ಪಡಿ ಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಇಂಥದನ್ನು ಮಾಡಿದ್ದರಿಂದ ದೇವರು ಅವರನ್ನು ಕೇವಲ ತುಚ್ಫವಾದ ಕಾಮಾಭಿಲಾಷೆಗೆ ಒಪ್ಪಿಸಿದನು. ಹೇಗಂದರೆ ಅವರ ಹೆಂಗಸರು ಸ್ವಾಭಾವಿಕವಾದ ಭೋಗವನ್ನು ಬಿಟ್ಟು ಸ್ವಭಾವಕ್ಕೆ ವಿರುದ್ಧವಾದ ಭೋಗವನ್ನು ಅನುಸರಿಸಿದರು.
Kannada Bible (KNCL) BSI 2016
ಮಾನವರು ಈ ರೀತಿ ವರ್ತಿಸಿದ್ದರಿಂದಲೇ ದೇವರು ಅವರನ್ನು ತುಚ್ಛವಾದ ಕಾಮಾಭಿಲಾಷೆಗಳಿಗೆ ಬಿಟ್ಟುಬಿಟ್ಟರು. ಅವರ ಸ್ತ್ರೀಯರು, ಸ್ವಾಭಾವಿಕವಾದ ಭೋಗವನ್ನು ತೊರೆದು ಸ್ವಭಾವಕ್ಕೆ ವಿರುದ್ಧವಾದ ಕಾಮಕೃತ್ಯಗಳನ್ನು ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಇಂಥದ್ದನ್ನು ಮಾಡಿದ್ದರಿಂದ ದೇವರು ಅವರನ್ನು ಕೇವಲ ಲಜ್ಜಾಸ್ಪದವಾದ ಕಾಮಾಭಿಲಾಷೆಗೆ ಒಪ್ಪಿಸಿಬಿಟ್ಟರು. ಹೇಗೆಂದರೆ ಅವರ ಸ್ತ್ರೀಯರು ಸಹ ಸ್ವಾಭಾವಿಕವಾದ ಭೋಗವನ್ನು ಬಿಟ್ಟು, ಅಸ್ವಾಭಾವಿಕವಾದದ್ದನ್ನು ಅನುಸರಿಸಿದರು.