Romans 1:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದೇರೀತಿಯಲ್ಲಿ, ಪುರುಷರು ಸ್ತ್ರೀಯರೊಂದಿಗೆ ಪಡೆಯುತ್ತಿದ್ದ ಸಹಜವಾದ ಲೈಂಗಿಕ ಸಂಪರ್ಕವನ್ನು ನಿಲ್ಲಿಸಿ ಉದ್ರೇಕಗೊಂಡ ಸಲಿಂಗಕಾಮಿಗಳಾದರು. ಅವರು ತಮ್ಮ ದುರ್ನಡತೆಗೆ ತಕ್ಕ ದಂಡನೆಯನ್ನು ತಮ್ಮ ದೇಹಗಳಿಗೆ ಬರಮಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರಂತೆ ಪುರುಷರು ಸಹ ಸ್ವಾಭಾವಿಕವಾದ ಸ್ತ್ರೀಸಂಗವನ್ನು ತೊರೆದು ತಮ್ಮತಮ್ಮಲಿಯೇ ಕಾಮೋದ್ರೇಕಗೊಂಡರು; ಸಲಿಂಗಕಾಮಿಗಳಾದರು; ಲಜ್ಜಾಹೀನರಾಗಿ ವರ್ತಿಸಿದರು; ತಮ್ಮ ದುರ್ನಡತೆಗೆ ತಕ್ಕ ಶಿಕ್ಷೆಯನ್ನು ತಮ್ಮ ಮೇಲೆ ಬರಮಾಡಿಕೊಂಡರು.
Kannada BSI Bible 2016
ಅದರಂತೆ ಗಂಡಸರೂ ಸ್ವಾಭಾವಿಕ ಸ್ತ್ರೀ ಭೋಗವನ್ನು ಬಿಟ್ಟು ಒಬ್ಬರಮೇಲೊಬ್ಬರು ತಮ್ಮ ಕಾಮಾತುರದಿಂದ ತಾಪಪಡುತ್ತಾ ಗಂಡಸರ ಸಂಗಡ ಗಂಡಸರು ಅಯೋಗ್ಯವಾದದ್ದನ್ನು ಮಾಡುತ್ತಾ ತಮ್ಮ ತಪ್ಪಿಗೆ ತಕ್ಕ ಪ್ರತಿಫಲವನ್ನು ತಮ್ಮಲ್ಲಿ ಹೊಂದಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರಂತೆ ಗಂಡಸರು ಸಹ ಸ್ವಾಭಾವಿಕವಾದ ಸ್ತ್ರೀಭೋಗವನ್ನು ಬಿಟ್ಟು ಒಬ್ಬರ ಮೇಲೊಬ್ಬರು ತಮ್ಮ ಕಾಮಾತುರದಿಂದ ತಾಪಪಡುತ್ತಾ ಗಂಡಸರ ಸಂಗಡ ಗಂಡಸರು ಕೇವಲ ಅವಲಕ್ಷಣವಾದದ್ದನ್ನು ನಡಿಸಿ ತಮ್ಮ ಭ್ರಾಂತಿಗೆ ತಕ್ಕ ಫಲವನ್ನು ತಮ್ಮಲ್ಲಿ ಹೊಂದುವವರಾದರು.
Kannada Bible (KNCL) BSI 2016
ಅಂತೆಯೇ ಪುರುಷರು ಸಹ ಸ್ವಾಭಾವಿಕವಾದ ಸ್ತ್ರೀಸಂಗವನ್ನು ತೊರೆದು, ತಮ್ಮತಮ್ಮಲ್ಲಿಯೇ ಕಾಮೋದ್ರೇಕಗೊಂಡರು; ಸಲಿಂಗಕಾಮಿಗಳಾದರು; ಲಜ್ಜಾಹೀನರಾಗಿ ವರ್ತಿಸಿದರು; ತಮ್ಮ ದುರ್ನಡತೆಗೆ ತಕ್ಕ ಶಿಕ್ಷೆಯನ್ನು ತಮ್ಮ ಮೇಲೆ ಬರಮಾಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರಂತೆ ಗಂಡಸರು ಸಹ ಸ್ವಾಭಾವಿಕವಾದ ಸ್ತ್ರೀಭೋಗವನ್ನು ಬಿಟ್ಟು ಒಬ್ಬರೊಂದಿಗೊಬ್ಬರು ಕಾಮಾತುರದಿಂದ ತಾಪಗೊಂಡರು. ಗಂಡಸರ ಸಂಗಡ ಗಂಡಸರು ಕೇವಲ ಅವಲಕ್ಷಣ ಕೃತ್ಯಗಳನ್ನು ನಡೆಸಿ ತಮ್ಮ ತಪ್ಪಿಗೆ ತಕ್ಕ ದಂಡನೆಯನ್ನು ಹೊಂದುವವರಾದರು.