Romans 1:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರಲ್ಲಿ ಪ್ರತಿಯೊಂದು ಬಗೆಯ ಪಾಪ, ದುಷ್ಟತನ, ಸ್ವಾರ್ಥ, ದ್ವೇಷ, ಹೊಟ್ಟೆಕಿಚ್ಚು, ಕೊಲೆ, ಹೊಡೆದಾಟ, ಸುಳ್ಳುನುಡಿ ಮತ್ತು ಕೆಟ್ಟ ಆಲೋಚನೆ ಇವುಗಳೆಲ್ಲಾ ತುಂಬಿಕೊಂಡಿವೆ. ಅವರು ಹರಟೆ ಹೊಡೆಯುತ್ತಾರೆ;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೇಗೆಂದರೆ ಅವರು ಸಕಲವಿಧವಾದ ಅನ್ಯಾಯ, ದುರ್ಮಾರ್ಗತನ, ಲೋಭ ದುಷ್ಟತ್ವಗಳಿಂದಲೂ ಹೊಟ್ಟೆಕಿಚ್ಚು, ಕೊಲೆ, ಜಗಳ, ಮೋಸ, ಹಗೆತನಗಳಿಂದ ತುಂಬಿದವರಾದರು.
Kannada BSI Bible 2016
ಹೀಗೆ ಅವರು ಸಕಲ ಅನೀತಿಯಿಂದಲೂ ಜಾರತ್ವ ದುರ್ಮಾರ್ಗತನ ದುರಾಶೆ ದುಷ್ಟತ್ವ ಇವುಗಳಿಂದಲೂ ತುಂಬಿದವರಾಗಿ ಹೊಟ್ಟೇಕಿಚ್ಚು ಕೊಲೆ ವಿವಾದ ಮೋಸ ತುಂಬಿದವರೂ ಅತಿಉಗ್ರತೆಯಿಂದ ತುಂಬಿದವರೂ ಪಿಸುಗುಟ್ಟುವ ವರೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಹೇಗಂದರೆ ಅವರು ಸಕಲವಿಧವಾದ ಅನ್ಯಾಯ ದುರ್ಮಾರ್ಗತನ ಲೋಲುಪ್ತಿ ದುಷ್ಟತ್ವಗಳಿಂದಲೂ ಹೊಟ್ಟೇಕಿಚ್ಚು ಕೊಲೆ ಜಗಳ ಮೋಸ ಹಗೆತನಗಳಿಂದಲೂ ತುಂಬಿದವರಾದರು.
Kannada Bible (KNCL) BSI 2016
ಸಕಲ ವಿಧವಾದ ಅನ್ಯಾಯ, ಅಕ್ರಮ, ದುರಾಶೆ, ದುರ್ನಡತೆ ಅವರಲ್ಲಿ ತುಂಬಿಕೊಂಡವು. ಮತ್ಸರ, ಕೊಲೆ, ಕಲಹ, ಕಪಟತನ, ಹಗೆತನ, ಇವೆಲ್ಲವೂ ಅವರಲ್ಲಿ ತುಂಬಿಹೋಗಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಸಕಲ ವಿಧವಾದ ಅನ್ಯಾಯ, ದುರ್ಮಾರ್ಗತನ, ಲೋಭ, ದುಷ್ಟತ್ವ, ಹೊಟ್ಟೆಕಿಚ್ಚು, ಕೊಲೆ, ಜಗಳ, ಕಪಟ, ಹಗೆತನಗಳಿಂದಲೂ ತುಂಬಿದವರಾದರು.