Romans 1:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರ ಮಗನೂ ನಮ್ಮ ಪ್ರಭುವೂ ಆಗಿರುವ ಯೇಸು ಕ್ರಿಸ್ತನ ವಿಷಯವೇ ಆ ಸುವಾರ್ತೆ. ಮನುಷ್ಯತ್ವದ ಮಟ್ಟಿಗೆ ಆತನು ದಾವೀದನ ಕುಟುಂಬದಲ್ಲಿ ಹುಟ್ಟಿದನು. ಆದರೆ ಯೇಸು ಪರಿಶುದ್ಧ ಆತ್ಮನ ಮೂಲಕ ಮಹಾಶಕ್ತಿಯೊಡನೆ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದು ತಾನೇ ದೇವರ ಮಗನೆಂಬುದನ್ನು ತೋರಿಸಿಕೊಟ್ಟನು. (Verses 3-4)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ.
Kannada BSI Bible 2016
ಅದು ಯಾವದೆಂದರೆ, ಆತನು ಶಾರೀರಕವಾಗಿ ದಾವೀದನ ಸಂತಾನದಲ್ಲಿ ಹುಟ್ಟಿದಾತನೂ ನಮ್ಮ ಕರ್ತನೂ ಆಗಿರುವ ದೇವರಕುಮಾರನಾದ ಯೇಸು ಕ್ರಿಸ್ತನ ವಿಷಯವಾ ದದ್ದೇ;
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಸುವಾರ್ತೆಯು ದೇವರ ಮಗನೂ ನಮ್ಮ ಕರ್ತನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದದ್ದು. ಆತನು ವಂಶಕ್ರಮದಿಂದ ದಾವೀದನ ಸಂತಾನದಲ್ಲಿ ಹುಟ್ಟಿದವನೂ,
Kannada Bible (KNCL) BSI 2016
ಈ ಸಂದೇಶ ದೇವರ ಪುತ್ರನೂ ನಮ್ಮ ಪ್ರಭುವೂ ಆದ ಯೇಸುಕ್ರಿಸ್ತರನ್ನು ಕುರಿತಾದುದು. ಮನುಷ್ಯತ್ವದ ಮಟ್ಟಿಗೆ ಯೇಸು ದಾವೀದನ ವಂಶಜರು; ದೈವಿಕ ಪರಿಶುದ್ಧತೆಯ ಮಟ್ಟಿಗೆ ಇವರು ದೇವರ ಶಕ್ತಿಯನ್ನು ವ್ಯಕ್ತಪಡಿಸುವ ದೇವರ ಪುತ್ರ. ಸತ್ತು ಪುನರುತ್ಥಾನ ಹೊಂದಿ ಇದನ್ನು ಖಚಿತಪಡಿಸಿದವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಸುವಾರ್ತೆಯು ದೇವಪುತ್ರನ ವಿಷಯವಾದದ್ದು. ಯೇಸು ಮನುಷ್ಯತ್ವದ ಪ್ರಕಾರ ದಾವೀದನ ಸಂತಾನದವರೂ