Romans 1:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಂಥವರಿಗೆ ಮರಣದಂಡನೆ ಆಗಬೇಕೆಂದು ದೇವರ ಧರ್ಮಶಾಸ್ತ್ರ ಹೇಳುತ್ತದೆ ಎಂಬುದು ಅವರಿಗೆ ಗೊತ್ತಿದೆ. ಆದರೂ ಅವರು ಇಂಥ ಕಾರ್ಯಗಳನ್ನು ಮಾಡುತ್ತಾರೆ ಮತ್ತು ಇಂಥ ಕಾರ್ಯಗಳನ್ನು ಮಾಡುವ ಜನರಿಗೆ ಪ್ರೋತ್ಸಾಹ ನೀಡುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಮಾಡುವವರನ್ನೂ ಹೊಗಳುತ್ತಾ ಪ್ರೇರೇಪಿಸುತ್ತಾರೆ.
Kannada BSI Bible 2016
ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವದಲ್ಲದೆ ಮಾಡುವವರನ್ನೂ ಅನುಮೋದಿಸುತ್ತಾರೆ.
Kannada Bible (KNCL) BSI 2016
ಇಂಥವುಗಳನ್ನು ಮಾಡುವವರು ಮರಣದಂಡನೆಗೆ ಪಾತ್ರರು ಎಂಬ ದೈವನಿಯಮವನ್ನು ಅರಿತಿದ್ದರೂ ಇಂಥ ಹೀನ ಕೃತ್ಯಗಳನ್ನು ಮಾಡುತ್ತಾರೆ. ತಾವು ಮಾಡುವುದೇ ಅಲ್ಲದೆ ಹಾಗೆಮಾಡುವ ಇತರರನ್ನೂ ಪ್ರೋತ್ಸಾಹಿಸುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಂಥವುಗಳನ್ನು ನಡೆಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೈವವಿಧಿಯನ್ನು ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಹಾಗೆ ಮಾಡುವವರನ್ನು ಮೆಚ್ಚುತ್ತಾರೆ.