Romans 1:7 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರೋಮಿನಲ್ಲಿರುವವರೂ ದೇವರ ಪವಿತ್ರ ಜನರಾಗಿರುವುದಕ್ಕಾಗಿ ದೇವರಿಂದಲೇ ಕರೆಯಲ್ಪಟ್ಟವರೂ ಆಗಿರುವ ನಿಮ್ಮೆಲ್ಲರಿಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ನೀವು ದೇವರಿಗೆ ಪ್ರಿಯರಾದ ಜನರಾಗಿದ್ದೀರಿ. ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನ ಹೆಸರಿನ ಪ್ರಸಿದ್ಧಿಗಾಗಿ ನಂಬಿಕೆಯೆಂಬ ವಿಧೇಯತ್ವವು ಉಂಟಾಗುವುದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಮತ್ತು ಅಪೊಸ್ತಲತನವನ್ನೂ ಹೊಂದಿದೆವು.
Kannada BSI Bible 2016
ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್‌ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ರೋಮಾಪುರದಲ್ಲಿ ದೇವರಿಗೆ ಪ್ರಿಯರೂ ದೇವಜನರಾಗುವದಕ್ಕೆ ಕರೆಯಲ್ಪಟ್ಟವರೂ ಆಗಿರುವವರೆಲ್ಲರಿಗೆ ಬರೆಯುವದೇನಂದರೆ - ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರೋಮ್ ನಗರದಲ್ಲಿ ದೇವರಿಗೆ ಪ್ರಿಯರೂ ದೇವರ ಪವಿತ್ರ ಜನರಾಗುವುದಕ್ಕೆ ಕರೆಯಲಾದವರೂ ಆಗಿರುವವರೆಲ್ಲರಿಗೂ: ನಮ್ಮ ತಂದೆಯಾದ ದೇವರಿಂದಲೂ ಕರ್ತ ಯೇಸು ಕ್ರಿಸ್ತರಿಂದಲೂ ಕೃಪೆಯೂ ಶಾಂತಿಯೂ ಆಗಲಿ.