Romans 1:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಖಂಡಿತವಾಗಿ ಜ್ಞಾಪಿಸಿಕೊಳ್ಳುತ್ತೇನೆ. ಇದು ಸತ್ಯವೆಂದು ದೇವರಿಗೆ ಗೊತ್ತಿದೆ. ದೇವರ ಮಗನ ವಿಷಯವಾದ ಸುವಾರ್ತೆಯನ್ನು ಜನರಿಗೆ ಸಾರುವುದರ ಮೂಲಕ ನಾನು ದೇವರನ್ನು ನನ್ನ ಆತ್ಮದಲ್ಲಿ ಆರಾಧಿಸುವವನಾಗಿದ್ದೇನೆ. ದೇವರ ಚಿತ್ತದಿಂದ, ನಿಮ್ಮ ಬಳಿಗೆ ಬರಲು ಅವಕಾಶವಾಗಬೇಕೆಂದು ಪ್ರಾರ್ಥಿಸುತ್ತೇನೆ. (Verses 9-10)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಪ್ರಾರ್ಥನೆ ಮಾಡುವಾಗೆಲ್ಲಾ ಎಡೆಬಿಡದೆ ನಿಮಗೋಸ್ಕರ ವಿಜ್ಞಾಪನೆ ಮಾಡುತ್ತೇನೆ. ದೇವರ ಮಗನ ಸುವಾರ್ತೆಯನ್ನು ಸಾರುತ್ತಾ ದೈವಸೇವೆಯನ್ನು ಮನಃಪೂರ್ವಕವಾಗಿ ಮಾಡಿಕೊಂಡು ಬರುತ್ತಿರುವ ದೇವರೇ ನನಗೆ ಸಾಕ್ಷಿ.
Kannada BSI Bible 2016
ನಾನು ಯಾವಾಗಲೂ ಪ್ರಾರ್ಥನೆಗಳಲ್ಲಿ ಎಡೆಬಿಡದೆ ನಿಮ್ಮನ್ನು ಜ್ಞಾಪಕ ಮಾಡಿ ಕೊಳ್ಳುತ್ತೇನೆ. ನಾನು ಯಾವಾತನ ಮಗನ ಸುವಾರ್ತೆ ಯಲ್ಲಿ ನನ್ನ ಆತ್ಮದೊಂದಿಗೆ ಸೇವಿಸುತ್ತೇನೋ ಆ ದೇವರೇ ಇದಕ್ಕೆ ನನ್ನ ಸಾಕ್ಷಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಪ್ರಾರ್ಥನೆ ಮಾಡುವಾಗೆಲ್ಲಾ ತಪ್ಪದೆ ನಿಮಗೋಸ್ಕರ ವಿಜ್ಞಾಪನೆಮಾಡಿ ಇನ್ನು ಮೇಲೆಯಾದರೂ ನಿಮ್ಮ ಬಳಿಗೆ ಬರುವದಕ್ಕೆ ದೇವರ ಚಿತ್ತದಿಂದ ನನಗೆ ಹೇಗೂ ಅನುಕೂಲವಾಗಬೇಕೆಂದು ಬೇಡಿಕೊಳ್ಳುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ; ಆತನ ಮಗನ ಸುವಾರ್ತೆಯನ್ನು ಸಾರುತ್ತಾ ಆತನನ್ನೇ ನನ್ನ ಆತ್ಮದಲ್ಲಿ ಆರಾಧಿಸುವವನಾಗಿದ್ದೇನೆ.
Kannada Bible (KNCL) BSI 2016
ನಾನು ಪ್ರಾರ್ಥನೆ ಮಾಡುವಾಗಲೆಲ್ಲ ತಪ್ಪದೆ, ನಿಮ್ಮ ಪರವಾಗಿ ವಿಜ್ಞಾಪನೆ ಮಾಡುತ್ತೇನೆ. ದೈವಚಿತ್ತದಿಂದ ನಾನು ನಿಮ್ಮಲ್ಲಿಗೆ ಬರಲು ಈಗಲಾದರೂ ಅನುಕೂಲವಾಗಲೆಂದು ಬೇಡಿಕೊಳ್ಳುತ್ತೇನೆ. ಇದಕ್ಕೆ ದೇವರೇ ಸಾಕ್ಷಿ. ಅವರ ಪುತ್ರನನ್ನೇ ಕುರಿತಾದ ಶುಭಸಂದೇಶವನ್ನು ಸಾರುತ್ತಾ ದೈವಸೇವೆಯನ್ನು ಮನಃಪೂರ್ವಕವಾಗಿ ಮಾಡಿಕೊಂಡು ಬರುತ್ತಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವಪುತ್ರನ ಸುವಾರ್ತೆಯನ್ನು ಸಾರುವುದರಿಂದ ದೇವರನ್ನೇ ನನ್ನ ಆತ್ಮದಲ್ಲಿ ಸೇವೆ ಮಾಡುವವನಾಗಿದ್ದೇನೆ. ಇದಕ್ಕೆ ದೇವರೇ ನನ್ನ ಸಾಕ್ಷಿ.