Romans 10:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏಕೆಂದರೆ ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವೂ ಇಲ್ಲ. ಎಲ್ಲರಿಗೂ ಒಬ್ಬನೇ ಪ್ರಭು. ತನ್ನಲ್ಲಿ ನಂಬಿಕೆಯಿಡುವ ಜನರೆಲ್ಲರಿಗೆ ಪ್ರಭುವು ಅನೇಕ ಆಶೀರ್ವಾದಗಳನ್ನು ಕೊಡುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ವಿಷಯದಲ್ಲಿ ಯೆಹೂದ್ಯರಿಗೂ ಅಥವಾ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. ಎಲ್ಲರಿಗೂ ಒಬ್ಬನೇ ಕರ್ತನು; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವುದಕ್ಕೆ ಶಕ್ತನಾಗಿದ್ದಾನೆ.
Kannada BSI Bible 2016
ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ವಿಷಯದಲ್ಲಿ ಯೆಹೂದ್ಯನಿಗೂ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. ಎಲ್ಲರಿಗೂ ಒಬ್ಬನೇ ಕರ್ತ; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವವನಾಗಿದ್ದಾನೆ.
Kannada Bible (KNCL) BSI 2016
ಈ ವಿಷಯದಲ್ಲಿ ಯೆಹೂದ್ಯರು, ಯೆಹೂದ್ಯರಲ್ಲದವರು ಎಂಬ ಭೇದಭಾವವಿಲ್ಲ. ಸರ್ವರಿಗೂ ಒಬ್ಬರೇ ಪ್ರಭು. ತಮ್ಮನ್ನು ಬೇಡಿಕೊಳ್ಳುವ ಎಲ್ಲರಿಗೂ ಅವರು ಧಾರಾಳವಾಗಿ ವರದಾನವನ್ನು ನೀಡುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ವಿಷಯದಲ್ಲಿ ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವೂ ಇಲ್ಲ. ಎಲ್ಲರಿಗೂ ಕರ್ತ ಆಗಿರುವ ಒಬ್ಬರೇ ಕರ್ತ; ಅವರು ತಮ್ಮನ್ನು ಕರೆಯುವವರೆಲ್ಲರನ್ನು ಹೇರಳವಾಗಿ ಆಶೀರ್ವದಿಸುತ್ತಾರೆ.