Romans 10:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರಭುವಿನಲ್ಲಿ ನಂಬಿಕೆಯಿಲ್ಲದೆ ಆತನಲ್ಲಿ ಭರವಸೆವಿಡುವುದಾದರೂ ಹೇಗೆ? ಪ್ರಭುವಿನ ವಿಷಯವನ್ನು ಕೇಳದೆ ಆತನಲ್ಲಿ ನಂಬಿಕೆ ಇಡುವುದಾದರೂ ಹೇಗೆ? ಮತ್ತೊಬ್ಬನು ತಿಳಿಸದ ಹೊರತು ಪ್ರಭುವಿನ ಬಗ್ಗೆ ಕೇಳುವುದಾದರೂ ಹೇಗೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವರು ನಂಬದೆ ಇರುವುದರಿಂದ ಆತನ ನಾಮವನ್ನು ಹೇಳಿಕೊಳ್ಳುವುದಾದರೂ ಹೇಗೆ? ಮತ್ತು ಆತನ ಸುದ್ದಿಯನ್ನು ಕೇಳದಿರುವಲ್ಲಿ ಆತನನ್ನು ನಂಬುವುದಾದರೂ ಹೇಗೆ? ಪ್ರಚಾರಪಡಿಸುವವನಿಲ್ಲದೆ ಕೇಳುವುದಾದರೂ ಹೇಗೆ? ಸುವಾರ್ತೆಸಾರುವವರನ್ನು ಕಳುಹಿಸದೆ ಸಾರುವುದು ಹೇಗೆ?
Kannada BSI Bible 2016
ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ?
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ತಾವು ಯಾವನನ್ನು ನಂಬಲಿಲ್ಲವೋ ಆತನ ನಾಮವನ್ನು ಹೇಳಿಕೊಳ್ಳುವದು ಹೇಗೆ? ಮತ್ತು ಆತನ ಸುದ್ದಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ? ಸಾರುವವರು ಕಳುಹಿಸಲ್ಪಡದೆ ಸಾರುವದೆಲ್ಲಿ?
Kannada Bible (KNCL) BSI 2016
ಪ್ರಭುವಿನಲ್ಲಿ ವಿಶ್ವಾಸವಿಲ್ಲದಿದ್ದರೆ ಅವರ ನಾಮಸ್ಮರಣೆ ಮಾಡುವುದಾದರೂ ಹೇಗೆ? ಅವರ ವಿಷಯವನ್ನು ಕುರಿತು ಕೇಳದಿದ್ದರೆ ಅವರನ್ನು ವಿಶ್ವಾಸಿಸುವುದಾದರೂ ಹೇಗೆ? ಬೋಧಿಸುವವರು ಇಲ್ಲದಿದ್ದರೆ ಅವರ ವಿಷಯವನ್ನು ಕುರಿತು ಕೇಳುವುದಾದರೂ ಹೇಗೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ, ತಾವು ವಿಶ್ವಾಸವಿಡದ ಕರ್ತನನ್ನು ಕರೆಯುವುದಾದರೂ ಹೇಗೆ? ತಾವು ಕೇಳದ ಕರ್ತನ ಬಗ್ಗೆ ಅವರು ವಿಶ್ವಾಸವಿಡುವುದು ಹೇಗೆ? ಕರ್ತನ ಬಗ್ಗೆ ಸಾರುವವನಿಲ್ಲದೆ ಅವರು ಕೇಳುವುದಾದರೂ ಹೇಗೆ?