Romans 10:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇಸ್ರೇಲಿನ ಜನರು ಅರ್ಥಮಾಡಿಕೊಳ್ಳಲಿಲ್ಲವೇ?” ಎಂದು ನಾನು ಮತ್ತೆ ಕೇಳುತ್ತೇನೆ. ಹೌದು, ಅವರು ಅರ್ಥಮಾಡಿಕೊಂಡರು. ಮೊದಲನೆಯದಾಗಿ, ದೇವರು ಮೋಶೆಯ ಮೂಲಕ ಹೀಗೆ ತಿಳಿಸಿದ್ದಾನೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ “ಇಸ್ರಾಯೇಲ್ಯರು ಆ ವಾರ್ತೆಯನ್ನು ತಿಳಿದುಕೊಳ್ಳಲಿಲ್ಲವೇನು” ಎಂದು ಹೇಳುತ್ತೇನೆ. ಈ ವಿಷಯದಲ್ಲಿ, “ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಅಸೂಯೆ ಹುಟ್ಟುವಂತೆ ಪ್ರೆರೇಪಿಸುತ್ತೇನೆ; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ರೊಚ್ಚಿಗೆಬ್ಬಿಸುವೆನು” ಎಂದು ಮೊದಲು ಮೋಶೆಯು ಹೇಳುತ್ತಾನೆ.
Kannada BSI Bible 2016
ಆದರೆ--ಇಸ್ರಾಯೇಲ್ಯರು ತಿಳುಕೊಳ್ಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಈ ವಿಷಯದಲ್ಲಿ--ನನ್ನ ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಹುರುಡು ಹುಟ್ಟಿಸುವೆನು; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು ಎಂದು ಮೊದಲು ಮೋಶೆಯು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಇಸ್ರಾಯೇಲ್ಯರು ಆ ವಾರ್ತೆಯನ್ನು ತಿಳುಕೊಳ್ಳಲಿಲ್ಲವೇನು ಎಂದು ಕೇಳುತ್ತೇನೆ. ಈ ವಿಷಯದಲ್ಲಿ - ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಹುರುಡುಹುಟ್ಟಿಸುವೆನು; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು ಎಂದು ಮೊದಲು ಮೋಶೆಯು ಹೇಳುತ್ತಾನೆ.
Kannada Bible (KNCL) BSI 2016
ಹಾಗೆಂದ ಮೇಲೆ ಇಸ್ರಯೇಲರು ಆ ಶುಭಸಂದೇಶವನ್ನು ಅರ್ಥಮಾಡಿಕೊಳ್ಳಲಿಲ್ಲ. ಎನ್ನೋಣವೆ? ಮೊದಲನೆಯದಾಗಿ, ಮೋಶೆಯ ಮಾತಿನಲ್ಲಿ ಉತ್ತರಿಸುವುದಾದರೆ: “ ‘ಜನಾಂಗ’ ಎನಿಸಿಕೊಳ್ಳದವರನ್ನು ನೋಡಿ ನೀವು ಅಸೂಯೆಪಡುವಂತೆ ಮಾಡುತ್ತೇನೆ; ಮತಿಹೀನರೆನಿಸಿಕೊಂಡ ಜನಾಂಗವನ್ನು ನೋಡಿ ನೀವು ಕೆರಳುವಂತೆ ಮಾಡುತ್ತೇನೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಇಸ್ರಾಯೇಲರಿಗೆ ಅರ್ಥವಾಗಲಿಲ್ಲವೇ? ಎಂದು ನಾನು ಪ್ರಶ್ನಿಸುತ್ತೇನೆ. ಮೊದಲನೆಯದಾಗಿ ಮೋಶೆಯು, “ನಾನು ಜನಾಂಗವಲ್ಲದವರ ಮೂಲಕ ನೀವು ಅಸೂಯೆಪಡುವಂತೆ ಮಾಡುವೆನು. ತಿಳುವಳಿಕೆಯಿಲ್ಲದ ಜನಾಂಗದವರ ಮೂಲಕ ನೀವು ಕೋಪಗೊಳ್ಳುವಂತೆ ಮಾಡುವೆನು,” ಎಂದು ಹೇಳುತ್ತಾನೆ.