Romans 10:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಯೆಶಾಯನು ದೇವರ ಈ ನುಡಿಯನ್ನು ಧೈರ್ಯವಾಗಿ ಹೇಳಿದ್ದಾನೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ, “ನನ್ನನ್ನು ಹುಡುಕದವರಿಗೂ ನಾನು ಸಿಕ್ಕಿದೆನು, ನನ್ನನ್ನು ಕೇಳದವರಿಗೆ ನಾನು ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ.
Kannada BSI Bible 2016
ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ--ನನ್ನನ್ನು ಹುಡುಕದವರಿಗೆ ಸಿಕ್ಕಿದೆನು, ನನ್ನ ವಿಷಯವಾಗಿ ವಿಚಾರ ಮಾಡದವರಿಗೂ ಪ್ರತ್ಯಕ್ಷನಾದೆನು ಎಂದು ಹೇಳುತ್ತಾನೆ.ಆದರೆ ಅವನು ಇಸ್ರಾಯೇಲ್ಯರ ವಿಷಯವಾಗಿ--ನನಗೆ ಅವಿಧೇಯ ರಾಗಿ ಎದುರು ಮಾತನಾಡುವ ಜನರ ಕಡೆಗೆ ನಾನು ದಿನವೆಲ್ಲಾ ಕೈ ಚಾಚಿದೆನು ಎಂದು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತಾಡಿ - ನನ್ನನ್ನು ಹುಡುಕದವರಿಗೂ ಸಿಕ್ಕಿದೆನು, ನನ್ನ ವಿಷಯ ವಿಚಾರಮಾಡದವರಿಗೂ ಪ್ರತ್ಯಕ್ಷನಾದೆನು ಎಂದು ಹೇಳುತ್ತಾನೆ.
Kannada Bible (KNCL) BSI 2016
ಯೆಶಾಯನು ಮತ್ತಷ್ಟು ದಿಟ್ಟತನದಿಂದ ಈ ರೀತಿ ಹೇಳಿದ್ದಾನೆ: “ನನ್ನನ್ನು ಅರಸದವರಿಗೂ ನಾನು ಕಾಣಿಸಿಕೊಂಡೆ ನನ್ನ ಬಗ್ಗೆ ವಿಚಾರಿಸದವರಿಗೂ ನಾನು ಪ್ರತ್ಯಕ್ಷನಾದೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೆಶಾಯನು ಬಹು ಧೈರ್ಯವಾಗಿ, “ನನ್ನನ್ನು ಹುಡುಕದವರಿಗೆ ನಾನು ಸಿಕ್ಕಿದೆನು. ನನ್ನ ವಿಷಯವಾಗಿ ವಿಚಾರ ಮಾಡದವರಿಗೂ ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ.