Romans 10:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದಲ್ಲದೆ, “ದೇವರ ವಾಕ್ಯವು ನಿಮ್ಮ ಸಮೀಪದಲ್ಲೇ ಇದೆ. ಅದು ನಿಮ್ಮ ಬಾಯಲ್ಲಿಯೂ ನಿಮ್ಮ ಹೃದಯದಲ್ಲಿಯೂ ಇದೆ” ಎಂದು ಪವಿತ್ರ ಗ್ರಂಥವು ಹೇಳುತ್ತದೆ. ನಾವು ಜನರಿಗೆ ನಂಬಿಕೆಯ ಕುರಿತಾಗಿ ಸಾರುವ ವಾಕ್ಯವೇ ಅದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ದೇವರ ವಾಕ್ಯವು ನಿನ್ನ ಸಮೀಪದಲ್ಲಿಯೇ ಇದೆ; ಅದು ನಿನ್ನ ಬಾಯಲ್ಲಿಯೂ, ನಿನ್ನ ಹೃದಯದಲ್ಲಿಯೂ ಇದೆ.” ಆ ವಾಕ್ಯವು ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.
Kannada BSI Bible 2016
ಆದರೆ ಅದು ಏನು ಹೇಳುತ್ತದೆ? ವಾಕ್ಯವು ನಿನ್ನ ಸವಿಾಪದಲ್ಲಿಯೂ ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಇದೆ ಎಂದು ಅನ್ನುತ್ತದೆ; ಅದೇನಂದರೆ--ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಮನಸ್ಸಿನಲ್ಲಿ ಅಂದುಕೊಳ್ಳಬೇಡ. ದೇವರ ವಾಕ್ಯವು ನಿನ್ನ ಸಮೀಪದಲ್ಲಿಯೇ ಇದೆ; ಅದು ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಇದೆ ಅನ್ನುತ್ತದೆ. ಆ ವಾಕ್ಯವು ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.
Kannada Bible (KNCL) BSI 2016
ಧರ್ಮಗ್ರಂಥವು ಹೇಳುವುದಿಷ್ಟೆ; ದೇವರ ವಾಕ್ಯ ನಿನ್ನ ಸಮೀಪದಲ್ಲೇ ಇದೆ. ಅದು ನಿನ್ನ ಬಾಯಲ್ಲೂ ಹೃದಯದಲ್ಲೂ ಇದೆ. ಅದೇ ನಾವು ನಿಮಗೆ ಬೋಧಿಸುವ ವಿಶ್ವಾಸದ ವಾಕ್ಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಇದು ಏನು ಹೇಳುತ್ತದೆ, “ತಕ್ಕ ವಾಕ್ಯವು ನಿನ್ನ ಬಳಿಯಲ್ಲಿ ಇದೆ, ಅದು ನಿನ್ನ ಬಾಯಿಯಲ್ಲಿಯೂ ಹೃದಯದಲ್ಲಿಯೂ ಇದೆ.” ಅದೇ ನಾವು ಸಾರುವ ವಿಶ್ವಾಸದ ವಾಕ್ಯ.