Romans 11:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗ ನಾನು ಯೆಹೂದ್ಯರಲ್ಲದ ಜನರೊಂದಿಗೆ ಮಾತಾಡುತ್ತಿದ್ದೇನೆ. ನಾನು ಅವರಿಗೆ ಅಪೊಸ್ತಲನಾಗಿದ್ದೇನೆ. ಆದ್ದರಿಂದ ನಾನು ಈ ಕೆಲಸವನ್ನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿಯೇ ಮಾಡುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನ್ಯಜನರಾಗಿರುವ ನಿಮಗೆ ನಾನು ಹೇಳುವುದೇನಂದರೆ, ನಾನು ಅನ್ಯಜನರಿಗೆ ಅಪೊಸ್ತಲನಾಗಿರಲಾಗಿ ನನ್ನ ಸೇವೆಯ ಬಗ್ಗೆ ಹೊಗಳಿಕೊಳ್ಳುತ್ತಿದ್ದೇನೆ.
Kannada BSI Bible 2016
ಅನ್ಯಜನರಾದ ನಿಮ್ಮೊಂದಿಗೆ ನಾನು ಮಾತನಾಡು ತ್ತೇನೆ. ನಾನು ಅನ್ಯಜನಗಳಿಗೆ ಅಪೊಸ್ತಲನಾಗಿ ರುವದರಿಂದ ನನ್ನ ಉದ್ಯೋಗವನ್ನು ಗಣನೆಗೆ ತರುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನ್ಯಜನರಾಗಿರುವ ನಿಮ್ಮ ಸಂಗಡ ಮಾತಾಡುತ್ತೇನೆ. ನಾನು ಅನ್ಯಜನರಿಗೆ ಅಪೊಸ್ತಲನಾಗಿರಲಾಗಿ ನನ್ನ ಉದ್ಯೋಗವನ್ನು ಗಣ್ಯತೆಗೆ ತರುತ್ತೇನೆ.
Kannada Bible (KNCL) BSI 2016
ಈಗ ನಾನು ಇಸ್ರಯೇಲರಲ್ಲದ ನಿಮ್ಮನ್ನು ಉದ್ದೇಶಿಸಿ ಹೇಳುತ್ತೇನೆ: ನಾನು ನಿಮ್ಮಂಥ ಅನ್ಯಜನರಿಗೆ ಪ್ರೇಷಿತನಾಗಿ ಕಳುಹಿಸಲ್ಪಟ್ಟವನು. ಇದರ ಬಗ್ಗೆ ಹೆಮ್ಮೆಪಡುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದ್ಯರಲ್ಲದವರಾಗಿರುವ ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ. ನಾನು ಯೆಹೂದ್ಯರಲ್ಲದವರಿಗೆ ಅಪೊಸ್ತಲನಾಗಿರುವಷ್ಟರ ಮಟ್ಟಿಗೆ ನನ್ನ ಸೇವೆಯನ್ನು ಪ್ರಭಾವಗೊಳಿಸುತ್ತೇನೆ.