Romans 11:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಮುರಿಯಲ್ಪಟ್ಟ ಆ ಕೊಂಬೆಗಳನ್ನು ಕಡೆಗಣಿಸಬೇಡಿ. ಅವುಗಳನ್ನು ಕಡೆಗಣಿಸಲು ನಿಮಗೆ ಯಾವ ಕಾರಣವೂ ಇಲ್ಲ. ಏಕೆಂದರೆ, ನೀವು ಬೇರಿಗೆ ಜೀವವನ್ನು ಕೊಡುವುದಿಲ್ಲ. ಬೇರು ನಿಮಗೆ ಜೀವವನ್ನು ಕೊಡುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ. ಅದು ನಿನಗೆ ಆಧಾರವಾಗಿದೆ.
Kannada BSI Bible 2016
ಆದರೂ ಆ ಕೊಂಬೆಗಳಿಗೆ ಮೇಲಾಗಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ, ಅದು ನಿನಗೆ ಆಧಾರವಾಗಿದೆಯಷ್ಟೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ, ಅದು ನಿನಗೆ ಆಧಾರವಾಗಿದೆಯಷ್ಟೆ.
Kannada Bible (KNCL) BSI 2016
ಹೀಗಿರಲಾಗಿ, ಕಡಿದುಹಾಕಿದ ರೆಂಬೆಗಳಂತಿರುವ ಇಸ್ರಯೇಲರನ್ನು ಕಡೆಗಣಿಸುತ್ತಾ ಹೆಮ್ಮೆಪಡಬೇಡ. ಹೆಮ್ಮೆಪಟ್ಟರೂ ನೀನು ಕೇವಲ ರೆಂಬೆ ಮಾತ್ರ. ಬೇರಿಗೆ ಆಧಾರ ನೀನಲ್ಲ. ನಿನಗೆ ಆಧಾರ ಬೇರು ಎಂಬುದನ್ನು ನೆನಪಿನಲ್ಲಿಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ. ಹೆಚ್ಚಿಸಿಕೊಂಡರೆ, ನೀನು ಆ ಬೇರಿನ ಆಧಾರವಲ್ಲ. ಆ ಬೇರೇ ನಿನಗೆ ಆಧಾರವಾಗಿದೆ.