Romans 11:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರು ಹುಟ್ಟುವುದಕ್ಕಿಂತ ಮೊದಲೇ ದೇವರು ಅವರನ್ನು ತನ್ನ ಜನರನ್ನಾಗಿ ಆರಿಸಿಕೊಂಡನು. ಆತನು ಅವರನ್ನು ಹೊರಕ್ಕೆ ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಪವಿತ್ರ ಗ್ರಂಥವು ಏನು ಹೇಳುತ್ತದೆ ಎಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ಇಸ್ರೇಲಿನ ಜನರ ವಿರೋಧವಾಗಿ ಎಲೀಯನು ದೇವರಿಗೆ ಮಾಡಿದ ಪ್ರಾರ್ಥನೆಯ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆದಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ತಾನು ಮುಂದಾಗಿ ತನ್ನ ಜನರಾಗುವುದಕ್ಕೆ ಗೊತ್ತುಮಾಡಿಕೊಂಡಿದ್ದ ಪ್ರಜೆಗಳನ್ನು ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಧರ್ಮಶಾಸ್ತ್ರವು ಹೇಳುವ ಮಾತು ನಿಮಗೆ ತಿಳಿಯದೋ?
Kannada BSI Bible 2016
ದೇವರು ಮುಂದಾಗಿ ಅರಿತುಕೊಂಡಿದ್ದ ತನ್ನ ಜನರನ್ನು ತಳ್ಳಿಹಾಕಲಿಲ್ಲ. ಎಲೀಯನ ವಿಷಯವಾಗಿಯಾದರೋ ಅವನು ಇಸ್ರಾಯೇಲ್ಯರಿಗೆ ವಿರೋಧವಾಗಿ ದೇವರಿಗೆ ವಿಜ್ಞಾಪನೆ ಮಾಡುತ್ತಾ--
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ತಾನು ಮುಂದಾಗಿ ತನ್ನ ಜನರಾಗುವದಕ್ಕೆ ಗೊತ್ತುಮಾಡಿಕೊಂಡಿದ್ದ ಪ್ರಜೆಯನ್ನು ತಳ್ಳಿ ಬಿಡಲಿಲ್ಲ. ಎಲೀಯನ ಚರಿತ್ರೆಯಲ್ಲಿ ಶಾಸ್ತ್ರವು ಹೇಳುವ ಮಾತು ನಿಮಗೆ ತಿಳಿಯದೋ?
Kannada Bible (KNCL) BSI 2016
ದೇವರು ಮುಂಚಿತವಾಗಿಯೇ ಆರಿಸಿಕೊಂಡಿದ್ದ ತಮ್ಮ ಜನಾಂಗವನ್ನು ತಿರಸ್ಕರಿಸಲಿಲ್ಲ. ಎಲೀಯನ ವಿಷಯವಾಗಿ ಪವಿತ್ರಗ್ರಂಥವು ಹೇಳಿರುವುದು ನಿಮಗೆ ತಿಳಿಯದೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ತಾವು ಮುಂದಾಗಿ ತಿಳಿದುಕೊಂಡ ತಮ್ಮ ಜನರನ್ನು ತ್ಯಜಿಸಲಿಲ್ಲ. ದೇವರ ವಾಕ್ಯವು ಎಲೀಯನನ್ನು ಕುರಿತು ಏನು ಹೇಳುತ್ತದೆಂದು ನಿಮಗೆ ಗೊತ್ತಿಲ್ಲವೋ?