Romans 11:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದು ಸತ್ಯ. ಆ ಕೊಂಬೆಗಳು ಮುರಿಯಲ್ಪಟ್ಟವು. ಅದಕ್ಕೆ ಅಪನಂಬಿಕೆಯೇ ಕಾರಣ. ನೀವು ಆ ಮರದ ಒಂದು ಭಾಗವಾದದ್ದು ನಿಮ್ಮ ನಂಬಿಕೆಯಿಂದಲೇ. ಆದ್ದರಿಂದ ಗರ್ವಪಡಬೇಡ, ಭಯದಿಂದಿರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಹೇಳುವುದು ನಿಜ. ಅವರು ನಂಬದೇ ಹೋದ್ದದರಿಂದ ಮುರಿದುಹಾಕಲ್ಪಟ್ಟರು. ನೀನು ನಿಂತಿರುವುದು ನಂಬಿಕೆಯಿಂದಲೇ.
Kannada BSI Bible 2016
ಒಳ್ಳೆಯದು, ಅವರು ನಂಬದೆ ಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ, ಗರ್ವ ಪಡಬೇಡ, ಭಯದಿಂದಿರು;
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಹೇಳುವದು ನಿಜ; ಅವರು ನಂಬದೆಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ.
Kannada Bible (KNCL) BSI 2016
ಅದು ಸರಿಯೆ. ಅವರ ಅವಿಶ್ವಾಸದ ಕಾರಣದಿಂದ ಅವರನ್ನು ಕಡಿದುಹಾಕಲಾಯಿತು. ನೀನು ದೃಢವಾಗಿ ನಿಂತಿರುವುದಾದರೋ ವಿಶ್ವಾಸದ ಪ್ರಯುಕ್ತವೇ. ಆದ್ದರಿಂದ ಗರ್ವಪಡಬೇಡ. ಭಯಭಕ್ತಿಯಿಂದಿರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ನಿಜವೆ, ಆದರೆ ಅವರ ಅವಿಶ್ವಾಸದಿಂದಲೇ ಅವರನ್ನು ಮುರಿದು ಹಾಕಲಾಯಿತು. ನೀನಾದರೋ ವಿಶ್ವಾಸದಿಂದಲೇ ಇನ್ನೂ ನಿಂತಿರುವೆ. ಗರ್ವಪಡದೆ ಭಯದಿಂದಿರು.