Romans 11:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದ್ಯರು ತಮ್ಮ ಅಪನಂಬಿಕೆಯನ್ನು ಬಿಡುವುದಾದರೆ, ದೇವರು ಅವರನ್ನು ಮತ್ತೆ ಸ್ವೀಕರಿಸಿಕೊಳ್ಳುವನು. ಅವರ ಮೊದಲಿನ ಸ್ಥಾನವನ್ನು ಅವರಿಗೆ ಕೊಡಲು ದೇವರು ಶಕ್ತನಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ಯರ ಕೂಡ ಇನ್ನು ಅಪನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಅವರನ್ನೂ ಕಸಿಮಾಡುವನು. ದೇವರು ಅವರನ್ನು ತಿರುಗಿ ಕಸಿಕಟ್ಟುವುದಕ್ಕೆ ಸಮರ್ಥನಾಗಿದ್ದಾನೆ.
Kannada BSI Bible 2016
ಅವರು ಕೂಡ ಇನ್ನು ಅಪ ನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಕಸಿಕಟ್ಟಲ್ಪಡುವರು; ಯಾಕಂದರೆ ದೇವರು ಅವರನ್ನು ತಿರಿಗಿ ದೇವರು ಕಸಿಕಟ್ಟುವದಕ್ಕೆ ಸಮರ್ಥನಾಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಕೂಡ ಇನ್ನು ಅಪನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಕಸಿಕಟ್ಟಲ್ಪಡುವರು; ದೇವರು ಅವರನ್ನು ತಿರಿಗಿ ಕಸಿಕಟ್ಟುವದಕ್ಕೆ ಸಮರ್ಥನಾಗಿದ್ದಾನೆ.
Kannada Bible (KNCL) BSI 2016
ಇಸ್ರಯೇಲರು ತಮ್ಮ ಅವಿಶ್ವಾಸವನ್ನು ತ್ಯಜಿಸಿದರೆ ಆಗ ಅವರನ್ನೂ ಕಸಿಮಾಡಲಾಗುವುದು. ಹಾಗೆ ಕಸಿಮಾಡಲು ದೇವರು ಸಮರ್ಥರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ಕೂಡ ಇನ್ನೂ ಅವಿಶ್ವಾಸದಲ್ಲಿ ಮುಂದುವರಿಯದಿದ್ದರೆ, ಕಸಿಕಟ್ಟಲಾಗುವರು, ಏಕೆಂದರೆ ಅವರನ್ನು ಪುನಃ ಕಸಿಕಟ್ಟಲು ದೇವರು ಶಕ್ತರಾಗಿರುತ್ತಾರೆ.