Romans 11:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಹೋದರ ಸಹೋದರಿಯರೇ, ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳದಂತೆ ಇದುವರೆಗೆ ರಹಸ್ಯವಾಗಿದ್ದ ಸತ್ಯವನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ: ಇಸ್ರೇಲಿನ ಜನರಲ್ಲಿ ಒಂದು ಪಾಲು ಮಂದಿ ಮೊಂಡರಾದರು. ಆದರೆ ಯೆಹೂದ್ಯರಲ್ಲದ ಜನರೆಲ್ಲರೂ ದೇವರ ಬಳಿಗೆ ಬಂದಾಗ ಅವರ ಮೊಂಡತನವು ಇಲ್ಲವಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು.
Kannada BSI Bible 2016
ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬದಾಗಿ ಎಣಿಸಿಕೊಳ್ಳದಂತೆ ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ; ಅದೇನಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವದು;
Kannada Bible (KNCL) BSI 2016
ಪ್ರಿಯ ಸಹೋದರರೇ, ನೀವೇ ಬುದ್ಧಿವಂತರೆಂದು ಉಬ್ಬಿಹೋಗಬೇಡಿ. ನಿಮಗೊಂದು ನಿಗೂಢ ರಹಸ್ಯವನ್ನು ತಿಳಿಸಬಯಸುತ್ತೇನೆ. ಅದೇನೆಂದರೆ, ಇಸ್ರಯೇಲರ ಮೊಂಡುತನವು ತಾತ್ಕಾಲಿಕವಾದುದು. ಇಸ್ರಯೇಲರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವ ತನಕ ಮಾತ್ರ ಅದು ಇರುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಿಯರೇ, ನೀವು ಈ ಮರ್ಮದ ಬಗ್ಗೆ ಅಜ್ಞಾನಿಗಳಾಗಿರಬೇಕೆಂದು ನಾನು ಬಯಸುವುದಿಲ್ಲ. ಅದೇನೆಂದರೆ, ಯೆಹೂದ್ಯರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವವರೆಗೆ ಮಾತ್ರ ಇಸ್ರಾಯೇಲರು ತಮ್ಮ ಹೃದಯದ ಕಾಠಿಣ್ಯಕ್ಕೆ ತಾತ್ಕಾಲಿಕವಾಗಿ ಒಳಗಾಗಿರುವರು.