Romans 11:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ಎಲ್ಲಾ ಇಸ್ರೇಲರು ರಕ್ಷಣೆ ಹೊಂದುವರು. ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ನಂತರ ಇಸ್ರಾಯೇಲ್ ಜನರೆಲ್ಲರೂ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ ಧರ್ಮಶಾಸ್ತ್ರದಲ್ಲಿ ಬಿಡಿಸುವವನು “ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು.
Kannada BSI Bible 2016
ಹೀಗೆ ಇಸ್ರಾಯೇಲ್‌ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಇಸ್ರಾಯೇಲ್ ಜನವೆಲ್ಲಾ ರಕ್ಷಣೆಹೊಂದುವದು. ಇದಕ್ಕೆ ಆಧಾರವಾಗಿ ಶಾಸ್ತ್ರದಲ್ಲಿ - ಬಿಡಿಸುವವನು ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು.
Kannada Bible (KNCL) BSI 2016
ಅನಂತರ ಇಸ್ರಯೇಲ್ ಜನಾಂಗವೆಲ್ಲವೂ ಜೀವೋದ್ಧಾರವನ್ನು ಹೊಂದುವುದು. ಇದಕ್ಕೆ ಆಧಾರವಾಗಿ ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “ಲೋಕೋದ್ಧಾರಕನು ಬರುವನು ಸಿಯೋನಿನಿಂದ; ಅಧರ್ಮತೆಯನು ನೀಗಿಸುವನು ಯಕೋಬವಂಶದಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಪವಿತ್ರ ವೇದದಲ್ಲಿ ಬರೆದಿರುವಂತೆ, ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು: “ವಿಮೋಚಿಸುವವರು ಒಬ್ಬರು ಚೀಯೋನಿನಿಂದ ಬರುತ್ತಾರೆ, ಅವರು ಯಾಕೋಬನ ಸಂತತಿಯಲ್ಲಿ ದೇವರನ್ನು ಅಲ್ಲಗಳೆಯುವ ಸ್ವಭಾವನ್ನು ತಾವೇ ತೆಗೆದುಹಾಕುವರು.