Romans 11:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲೀಯನು, “ಪ್ರಭುವೇ, ಜನರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು; ನಿನ್ನ ಯಜ್ಞವೇದಿಕೆಗಳನ್ನು ನಾಶಮಾಡಿದರು. ಪ್ರವಾದಿಗಳಲ್ಲಿ ನಾನೊಬ್ಬನು ಮಾತ್ರ ಇನ್ನೂ ಬದುಕಿದ್ದೇನೆ. ಈಗ ಜನರು ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ” ಎಂದು ಪ್ರಾರ್ಥಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ದೇವರ ಮುಂದೆ, “ಕರ್ತನೇ ಅವರು ನಿನ್ನ ಪ್ರವಾದಿಗಳನ್ನು ಸಂಹರಿಸಿದ್ದಾರೆ, ನಿನ್ನ ಯಜ್ಞವೇದಿಗಳನ್ನು ಒಡೆದು ಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಅವರು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ” ಎಂದು ಇಸ್ರಾಯೇಲ್ಯರ ಮೇಲೆ ದೂರು ಹೇಳಿದ್ದಕ್ಕೆ.
Kannada BSI Bible 2016
ಕರ್ತನೇ, ಅವರು ನಿನ್ನ ಪ್ರವಾದಿಗಳನ್ನು ಕೊಂದು ನಿನ್ನ ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ; ಆದರೆ ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಿದ್ದಾರೆ ಎಂದು ಬರಹವು ಹೇಳಿದ್ದು ನಿಮಗೆ ಗೊತ್ತಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ದೇವರ ಮುಂದೆ - ಕರ್ತನೇ, ಅವರು ನಿನ್ನ ಪ್ರವಾದಿಗಳನ್ನು ಸಂಹರಿಸಿದ್ದಾರೆ, ನಿನ್ನ ಯಜ್ಞವೇದಿಗಳನ್ನು ಒಡೆದುಹಾಕಿದ್ದಾರೆ, ನಾನೊಬ್ಬನೇ ಉಳಿದಿದ್ದೇನೆ, ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ
Kannada Bible (KNCL) BSI 2016
ಆತನು ಇಸ್ರಯೇಲರ ವಿರುದ್ಧ, “ಸರ್ವೇಶ್ವರಾ, ಈ ಜನರು ನಿಮ್ಮ ಪ್ರವಾದಿಗಳನ್ನು ಸಂಹರಿಸಿದ್ದಾರೆ. ನಿಮ್ಮ ಬಲಿಪೀಠಗಳನ್ನು ಕೆಡವಿಹಾಕಿದ್ದಾರೆ; ಉಳಿದಿರುವವನು ನಾನೊಬ್ಬನೇ. ನನ್ನನ್ನೂ ಕೊಲ್ಲಲು ಯತ್ನಿಸುತ್ತಿದ್ದಾರೆ,” ಎಂದು ದೇವರಿಗೆ ದೂರಿತ್ತನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಕರ್ತಾ, ಅವರು ನಿಮ್ಮ ಪ್ರವಾದಿಗಳನ್ನು ಕೊಂದಿದ್ದಾರೆ. ನಿಮ್ಮ ಬಲಿಪೀಠವನ್ನು ಒಡೆದುಹಾಕಿದ್ದಾರೆ, ನಾನು ಒಬ್ಬನೇ ಉಳಿದಿದ್ದೇನೆ. ಅವರು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ,” ಎಂದು ಇಸ್ರಾಯೇಲರಿಗೆ ವಿರೋಧವಾಗಿ ದೇವರಲ್ಲಿ ವಿಜ್ಞಾಪನೆ ಮಾಡಿಕೊಂಡನು.