Romans 11:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರ ಕೃಪೆಯ ಮೂಲಕ ಆರಿಸಲ್ಪಟ್ಟಿರುವ ಅವರು ದೇವರ ಮಕ್ಕಳಾದದ್ದು ತಮ್ಮ ಕ್ರಿಯೆಗಳಿಂದಲ್ಲ. ಇಲ್ಲದಿದ್ದರೆ, ದೇವರ ಕೃಪಾವರವು ಕೃಪಾವರವೆನಿಸಿಕೊಳ್ಳುತ್ತಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೃಪೆಯಿಂದ ಆರಿಸಿಕೊಂಡನು ಅಂದ ಮೇಲೆ ಒಳ್ಳೆಯ ಕಾರ್ಯದಿಂದಲ್ಲ. ಹಾಗಲ್ಲದ ಪಕ್ಷಕ್ಕೆ ಕೃಪೆಯನ್ನು ಇನ್ನು ಕೃಪೆಯನ್ನುವುದಕ್ಕಾಗುವುದಿಲ್ಲ.
Kannada BSI Bible 2016
ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೃಪೆಯಿಂದ ಆದುಕೊಂಡನು ಅಂದ ಮೇಲೆ ಪುಣ್ಯಕ್ರಿಯೆಗಳ ಕಾರಣದಿಂದ ಆದುಕೊಳ್ಳಲಿಲ್ಲವಷ್ಟೆ; ಹಾಗಲ್ಲದ ಪಕ್ಷಕ್ಕೆ ಕೃಪೆಯನ್ನು ಇನ್ನು ಕೃಪೆಯನ್ನುವದಕ್ಕಾಗುವದಿಲ್ಲ.
Kannada Bible (KNCL) BSI 2016
ಅವರು ಆಯ್ಕೆಯಾದುದು ತಮ್ಮ ಸತ್ಕಾರ್ಯಗಳ ಆಧಾರದಿಂದಲ್ಲ, ದೈವಾನುಗ್ರಹದಿಂದಲೇ. ಇಲ್ಲದಿದ್ದರೆ, ದೈವಾನುಗ್ರಹ ನಿಜವಾಗಿ ದೈವಾನುಗ್ರಹ ಎನಿಸಿಕೊಳ್ಳುತ್ತಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಆಯ್ಕೆಯು ಕ್ರಿಯೆಗಳ ಆಧಾರದಿಂದಲ್ಲ, ಕೃಪೆಯಿಂದಲೇ ಆಗಿರುತ್ತದೆ. ಕ್ರಿಯೆಗಳಿಂದ ಅದು ಆಗಿದ್ದರೆ ಇನ್ನೆಂದಿಗೂ ಕೃಪೆಯಾಗಲಾರದು.