Romans 12:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಹೋದರ ಸಹೋದರಿಯರೆಂಬ ಅನ್ಯೋನ್ಯಭಾವದಿಂದ ಒಬ್ಬರನ್ನೊಬ್ಬರು ಪ್ರೀತಿಸಿರಿ. ನೀವು ನಿಮಗೋಸ್ಕರ ಬಯಸುವ ಮರ್ಯಾದೆಗಿಂತಲೂ ಹೆಚ್ಚು ಮರ್ಯಾದೆಯನ್ನು ನಿಮ್ಮ ಸಹೋದರ ಸಹೋದರಿಯರಿಗೆ ಕೊಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕ್ರೈಸ್ತ ಸಹೋದರರು ಅಣ್ಣ ತಮ್ಮಂದಿರೆಂದು ತಿಳಿದು ಒಬ್ಬರನ್ನೊಬ್ಬರು ಪ್ರೀತಿಸಿರಿ. ಗೌರವಮರ್ಯಾದೆಗಳನ್ನು ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.
Kannada BSI Bible 2016
ಸಹೋದರ ಪ್ರೀತಿಯಿಂದ ಒಬ್ಬರಿಗೊಬ್ಬರು ಕರುಣಾ ವಾತ್ಸಲ್ಯವುಳ್ಳ ವರಾಗಿರ್ರಿ; ಸನ್ಮಾನಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರ್ರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕ್ರೈಸ್ತ ಸಹೋದರರು ಅಣ್ಣತಮ್ಮಂದಿರೆಂದು ಒಬ್ಬರನ್ನೊಬ್ಬರು ಪ್ರೀತಿಸಿರಿ. ಮಾನಮರ್ಯಾದೆಯನ್ನು ತೋರಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.
Kannada Bible (KNCL) BSI 2016
ಸಹೋದರ ಭಾವನೆಯಿಂದ ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿ ಪ್ರೀತಿಸಿರಿ. ಗೌರವ ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬರಿಗೊಬ್ಬರು ಸಹೋದರ ಪ್ರೀತಿಯಲ್ಲಿ ಸಮರ್ಪಿತರಾಗಿರಿ. ಗೌರವಿಸುವುದರಲ್ಲಿ ಒಬ್ಬರಿಗೊಬ್ಬರು ಮುಂದಾಗಿರಿ.