Romans 12:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಲೋಕದವರ ನಡವಳಿಕೆಯನ್ನು ಅನುಸರಿಸದೆ ಅಂತರಂಗದಲ್ಲಿ ಮಾರ್ಪಾಟನ್ನು ಹೊಂದಿದವರಾಗಿದ್ದು ಪರಲೋಕ ಭಾವದವರಾಗಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಮೆಚ್ಚಿಕೆಯಾದುದು ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.
Kannada BSI Bible 2016
ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತಕ್ಕನುಸಾರವಾದದ್ದು ಅಂದರೆ ಉತ್ತಮವಾದದ್ದೂ ಮೆಚ್ಚಿಕೆಯಾದದ್ದೂ ದೋಷವಿಲ್ಲದ್ದೂ ಯಾವ ಯಾವದೆಂದು ವಿವೇಚಿಸಿ ತಿಳುಕೊಳ್ಳುವಿರಿ.
Kannada Bible (KNCL) BSI 2016
ಇಹಲೋಕದ ಆಚಾರವಿಚಾರಗಳಿಗೆ ಮಾರುಹೋಗಬೇಡಿ. ಬದಲಿಗೆ, ಮಾನಸಾಂತರಗೊಂಡು ನೂತನ ಜೀವಿಗಳಾಗಿ ಬಾಳಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಉನ್ನತವಾದುದು, ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.