Romans 12:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ನನಗೆ ವಿಶೇಷವಾದ ಒಂದು ವರವನ್ನು ಕೊಟ್ಟಿದ್ದಾನೆ. ಆದಕಾರಣವೇ, ನಿಮ್ಮಲ್ಲಿರುವ ಪ್ರತಿಯೊಬ್ಬರಿಗೂ ಈ ಸಂಗತಿಗಳನ್ನು ತಿಳಿಸುತ್ತಿದ್ದೇನೆ. ನೀವು ನಿಮ್ಮ ನಿಜವಾದ ಯೋಗ್ಯತೆಗಿಂತಲೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಬೇಡಿ. ನೀವು ನಿಮ್ಮ ವಿಷಯದಲ್ಲಿ ಏನು ಭಾವಿಸಿಕೊಂಡರೂ ಆ ಭಾವನೆಯು ನಿಮ್ಮ ನಿಜವಾದ ಯೋಗ್ಯತೆಗೆ ಸರಿಸಮಾನವಾಗಿರಬೇಕು. ದೇವರು ನಿಮಗೆ ಎಂಥ ನಂಬಿಕೆಯನ್ನು ಕೊಟ್ಟಿದ್ದಾನೊ ಆ ನಂಬಿಕೆಗೆ ತಕ್ಕಂತೆ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು.
Kannada BSI Bible 2016
ನಿಮ್ಮೊಳಗೆ ಪ್ರತಿಯೊಬ್ಬನು ತನ್ನ ಯೋಗ್ಯತೆಗೆ ವಿಾರಿ ಭಾವಿಸಿಕೊಳ್ಳದೆ ದೇವರು ಪ್ರತಿಯೊಬ್ಬನಿಗೆ ಅವನವನ ವಿಶ್ವಾಸದ ಪ್ರಮಾಣಕ್ಕನುಸಾರವಾಗಿ ಕೊಟ್ಟಂತೆ ತನ್ನನ್ನು ಮಿತವಾಗಿ ತಿಳಿದುಕೊಳ್ಳಬೇಕೆಂದು ನನಗೆ ಕೊಡಲ್ಪಟ್ಟ ಕೃಪೆಗನುಸಾರವಾಗಿ ನಾನು ಹೇಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ನನಗೆ ಕೃಪೆಮಾಡಿದ ಸೇವೆಯನ್ನು ನಡಿಸಿ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ವಿಶ್ವಾಸ ಬಲವನ್ನು ಕೊಟ್ಟನೋ ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ಭಾವಿಸಿಕೊಳ್ಳಬೇಕು.
Kannada Bible (KNCL) BSI 2016
ದೇವರು ನನಗೆ ದಯಪಾಲಿಸಿರುವ ಸೇವೆಯ ನಿಮಿತ್ತ ನಾನು ನಿಮಗೆ ಹೇಳುವ ಬುದ್ಧಿಮಾತಿದು: ನಿಮ್ಮಲ್ಲಿ ಯಾರೂ ತನ್ನನ್ನೇ ಅತಿಯಾಗಿ ಭಾವಿಸಿಕೊಳ್ಳದಿರಲಿ. ದೇವರು ತನಗೆ ಇತ್ತಿರುವ ವಿಶ್ವಾಸದ ಪರಿಮಾಣದ ಮೇರೆಗೆ ಪ್ರತಿಯೊಬ್ಬನೂ ತನ್ನ ಬಗ್ಗೆ ಸರಿಯಾದ ಅಭಿಪ್ರಾಯ ಹೊಂದಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನಗೆ ದಯಪಾಲಿಸಿರುವ ಕೃಪೆಯಿಂದ ನಿಮ್ಮಲ್ಲಿ ಪ್ರತಿಯೊಬ್ಬರಿಗೂ ನಾನು ಹೇಳುವುದೇನೆಂದರೆ, ನೀವು ಭಾವಿಸುವುದಕ್ಕಿಂತ ಹೆಚ್ಚಾಗಿ ಯಾರೂ ನಿಮ್ಮನ್ನು ನೀವೇ ಉನ್ನತವಾಗಿ ಭಾವಿಸಿಕೊಳ್ಳಬೇಡಿರಿ. ಅದರ ಬದಲಾಗಿ ದೇವರು ನಿಮಗೆ ಅನುಗ್ರಹಿಸಿರುವ ವಿಶ್ವಾಸದ ಅಳತೆಗೆ ಅನುಸಾರವಾಗಿ ಸ್ವಸ್ಥಚಿತ್ತವುಳ್ಳವರಾಗಿ ಭಾವಿಸಿಕೊಳ್ಳಿರಿ.