Romans 12:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವೆಲ್ಲರೂ ಬೇರೆಬೇರೆ ವರಗಳನ್ನು ಹೊಂದಿದ್ದೇವೆ. ದೇವರು ನಮಗೆ ಕೊಟ್ಟಿರುವ ಕೃಪೆಯಿಂದಲೇ ಪ್ರತಿಯೊಂದು ವರವು ಬಂದಿದೆ. ಪ್ರವಾದಿಸುವ ವರವನ್ನು ಹೊಂದಿರುವವನು ತನಗಿರುವ ನಂಬಿಕೆಯೊಂದಿಗೆ ಆ ವರವನ್ನು ಉಪಯೋಗಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ನಮಗೆ ಕೃಪೆಮಾಡಿದ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ಹೊಂದಿದ ವರವು ಪ್ರವಾದನೆ ರೂಪವಾಗಿದ್ದರೆ, ನಮ್ಮ ನಂಬಿಕೆಗೆ ತಕ್ಕ ಹಾಗೆ ಪ್ರವಾದನೆ ಹೇಳೋಣ.
Kannada BSI Bible 2016
ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ನಮಗೆ ಕೃಪೆಮಾಡಿದ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ಹೊಂದಿದ ವರವು ಪ್ರವಾದನೆಯ ರೂಪವಾಗಿದ್ದರೆ ನಮ್ಮ ವಿಶ್ವಾಸ ವರಕ್ಕೆ ತಕ್ಕ ಹಾಗೆ ಪ್ರವಾದನೆ ಹೇಳೋಣ.
Kannada Bible (KNCL) BSI 2016
ದೇವರು ಅನುಗ್ರಹಿಸಿರುವ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ನಾವು ಹೊಂದಿರುವ ವರವು ಪ್ರವಾದನೆಯ ವರವಾಗಿದ್ದರೆ ನಮ್ಮ ವಿಶ್ವಾಸಕ್ಕೆ ಅನುಗುಣವಾಗಿ ಅದನ್ನು ಉಪಯೋಗಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮಗೆ ಕೊಟ್ಟಿರುವ ದೇವರ ಕೃಪೆಗೆ ಅನುಸಾರವಾಗಿ ನಮಗೆ ಬೇರೆ ಬೇರೆ ವರಗಳಿರುತ್ತವೆ. ಒಬ್ಬನಿಗೆ ಪ್ರವಾದನಾ ವರವಾಗಿದ್ದರೆ, ಅದನ್ನು ಅವನ ವಿಶ್ವಾಸದ ಅಳತೆಗೆ ತಕ್ಕ ರೀತಿಯಲ್ಲಿ ಉಪಯೋಗಿಸಲಿ.