Romans 12:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಉಪದೇಶಮಾಡುವ ವರವನ್ನು ಹೊಂದಿರುವವನು ಉಪದೇಶ ಮಾಡಬೇಕು. ಸಂತೈಸುವ ವರವನ್ನು ಹೊಂದಿರುವವನು ಬೇರೆಯವರನ್ನು ಸಂತೈಸಬೇಕು. ದಾನಮಾಡುವ ವರವನ್ನು ಹೊಂದಿರುವವನು ಉದಾರವಾಗಿ ಕೊಡಬೇಕು. ನಾಯಕತ್ವದ ವರವನ್ನು ಹೊಂದಿರುವವನು ನಾಯಕತ್ವವನ್ನು ವಹಿಸಿಕೊಂಡಿರುವಾಗ ಕಷ್ಟಪಟ್ಟು ದುಡಿಯಬೇಕು. ಕನಿಕರವನ್ನು ತೋರುವ ವರವನ್ನು ಹೊಂದಿರುವವನು ಆನಂದದಿಂದ ಆ ಕಾರ್ಯವನ್ನು ಮಾಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೋಧಿಸುವವನು ಬೋಧಿಸುವುದರಲ್ಲಿಯೂ, ಬುದ್ಧಿಹೇಳುವವನು ಬುದ್ಧಿ ಹೇಳುವುದರಲ್ಲಿಯೂ ನಿರತನಾಗಿರಲಿ. ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. ದಾರಿ ತೋರಿಸುವವನು ಆಸಕ್ತಿಯಿಂದ ಅದನ್ನು ಮಾಡಲಿ. ಕಷ್ಟದಲ್ಲಿರುವವರಿಗೆ ಉಪಕಾರಮಾಡುವವನು ಸಂತೋಷವಾಗಿ ಮಾಡಲಿ.
Kannada BSI Bible 2016
ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೋಧಿಸುವವನು ಬೋಧಿಸುವದರಲ್ಲಿಯೂ ಬುದ್ಧಿ ಹೇಳುವವನು ಬುದ್ಧಿ ಹೇಳುವದರಲ್ಲಿಯೂ ನಿರತನಾಗಿರಲಿ. ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. ಹಿರೀತನ ನಡಿಸುವವನು ಆಸಕ್ತಿಯಿಂದ ನಡಿಸಲಿ. ಕಷ್ಟದಲ್ಲಿರುವವರಿಗೆ ಉಪಕಾರ ಮಾಡುವವನು ಸಂತೋಷವಾಗಿ ಮಾಡಲಿ.
Kannada Bible (KNCL) BSI 2016
ಉಪದೇಶಕನು ಉಪದೇಶಿಸುವುದರಲ್ಲಿಯೂ ನಿರತನಾಗಿರಲಿ. ದಾನಮಾಡುವವನು ಧಾರಾಳವಾಗಿ ದಾನ ಮಾಡಲಿ. ಅಧಿಕಾರ ನಡೆಸುವವನು ನಿಷ್ಠೆಯಿಂದ ನಡೆಸಲಿ. ಕರುಣಾಪೂರಿತ ಕಾರ್ಯಗಳನ್ನು ಕೈಗೊಳ್ಳುವವನು ಹರ್ಷಚಿತ್ತನಾಗಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ಪ್ರೋತ್ಸಾಹಗೊಳಿಸುವುದಾಗಿದ್ದರೆ, ಅವನು ಪ್ರೋತ್ಸಾಹಗೊಳಿಸಲಿ. ದಾನಕೊಡುವ ವರವಾಗಿದ್ದರೆ, ಅವನು ಧಾರಾಳವಾಗಿ ಕೊಡಲಿ. ನಾಯಕತ್ವ ವಹಿಸುವ ವರವಾಗಿದ್ದರೆ, ಅವನು ಶ್ರದ್ಧೆಯಿಂದ ಮಾಡಲಿ ದಯೆ ತೋರಿಸುವ ವರವಾಗಿದ್ದರೆ ಅದನ್ನು ಅವನು ಸಂತೋಷದಿಂದ ಮಾಡಲಿ.