Romans 13:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವೆಲ್ಲರೂ ಸರ್ಕಾರದ ಅಧಿಕಾರಿಗಳಿಗೆ ವಿಧೇಯರಾಗಿರಬೇಕು. ಪ್ರತಿಯೊಬ್ಬ ಅಧಿಕಾರಿಗೆ ಅಧಿಕಾರವನ್ನು ಕೊಟ್ಟಿರುವವನು ದೇವರೇ. ಈಗಿರುವ ಎಲ್ಲಾ ಅಧಿಕಾರಿಗಳಿಗೆ ದೇವರೇ ಅಧಿಕಾರವನ್ನು ಕೊಟ್ಟಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ. ಯಾಕೆಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವು ದೊರೆತಿರುವುದಿಲ್ಲ. ಇರುವ ಅಧಿಕಾರಿಗಳಾದರೋ ದೇವರಿಂದ ನೇಮಿಸಲ್ಪಟ್ಟವರು.
Kannada BSI Bible 2016
ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವರಿಂದ ನೇವಿುಸಲ್ಪಟ್ಟವರು.
Kannada Bible (KNCL) BSI 2016
ಪ್ರತಿಯೊಬ್ಬನು ತನ್ನ ಮೇಲಿನ ಅಧಿಕಾರಿಗಳಿಗೆ ಅಧೀನನಾಗಿರಬೇಕು. ಅಧಿಕಾರವೆಲ್ಲವೂ ಬರುವುದು ದೇವರಿಂದಲೇ. ಈಗಿರುವ ಅಧಿಕಾರಿಗಳೂ ದೇವರಿಂದಲೇ ನೇಮಕಗೊಂಡವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರತಿಯೊಬ್ಬನೂ ಮೇಲಧಿಕಾರಿಗಳಿಗೆ ಅಧೀನನಾಗಿರಬೇಕು, ಏಕೆಂದರೆ ದೇವರು ನೇಮಿಸಿದ ಅಧಿಕಾರದ ಹೊರತು ಬೇರೆ ಯಾವದೂ ಇರುವುದಿಲ್ಲ. ಇರುವ ಅಧಿಕಾರಗಳು ದೇವರಿಂದಲೇ ನೇಮಕಗೊಂಡಿವೆ.