Romans 13:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ಪ್ರಾಮುಖ್ಯವಾದ ಸಮಯದಲ್ಲಿ ಜೀವಿಸುತ್ತಿರುವುದರಿಂದ ಈ ವಿಷಯಗಳನ್ನು ಹೇಳುತ್ತಿದ್ದೇನೆ ಎಂಬುದು ನಿಮಗೆ ಗೊತ್ತೇ ಇದೆ. ಹೌದು, ನೀವು ನಿದ್ರೆಯಿಂದ ಎಚ್ಚರಗೊಳ್ಳುವ ಕಾಲ ಇದಾಗಿದೆ. ನಾವು ವಿಶ್ವಾಸಿಗಳಾದ ಕಾಲಕ್ಕಿಂತ ಈಗ ನಮ್ಮ ರಕ್ಷಣೆಯು ಸಮೀಪವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗಿರತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದುದಕ್ಕಿಂತ ಈಗ ನಮ್ಮ ವಿಮೋಚನೆಯ ಕಾಲವು ಹತ್ತಿರವಾಗಿದೆ.
Kannada BSI Bible 2016
ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ವಿಮೋಚನೆಯು ಹತ್ತಿರವಾಯಿತು.
Kannada Bible (KNCL) BSI 2016
ಇದೆಂಥ ಕಾಲವೆಂದು ತಿಳಿದಿರುವ ನೀವು ಇದೆಲ್ಲವನ್ನು ಮಾಡಬೇಕು. ನಿದ್ರೆಯಿಂದ ಎಚ್ಚೆತ್ತುಕೊಳ್ಳುವ ವೇಳೆಯು ಸಮೀಪಿಸಿತು. ನಾವು ಕ್ರಿಸ್ತಯೇಸುವನ್ನು ವಿಶ್ವಾಸಿಸಲು ಆರಂಭಿಸಿದಾಗ ಇದ್ದುದಕ್ಕಿಂತಲೂ ಈಗ ನಮ್ಮ ಉದ್ಧಾರವು ಸಮೀಪವಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗಿನ ಕಾಲವನ್ನು ತಿಳಿದು ಇದನ್ನೆಲ್ಲಾ ಮಾಡಿರಿ. ನೀವು ನಿದ್ರೆಯಿಂದ ಎಚ್ಚರಗೊಳ್ಳುವ ಗಳಿಗೆಯಾಗಿದೆ. ಏಕೆಂದರೆ, ನಮ್ಮ ರಕ್ಷಣೆಯು ನಾವು ಮೊದಲು ವಿಶ್ವಾಸವಿಟ್ಟಿದಕ್ಕಿಂತ ಈಗ ಹತ್ತಿರವಾಗಿರುತ್ತದೆ.