Romans 13:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸರಿಯಾದದ್ದನ್ನು ಮಾಡುವ ಜನರಿಗೆ ಅಧಿಕಾರಿಗಳ ಭಯವಿರುವುದಿಲ್ಲ. ಆದರೆ ಕೆಟ್ಟದ್ದನ್ನು ಮಾಡುವ ಜನರಿಗೆ ಅಧಿಕಾರಿಗಳ ಭಯವಿರುತ್ತದೆ. ನೀವು ಅಧಿಕಾರಿಗಳಿಗೆ ಭಯಪಡದವರಾಗಿರಬೇಕೆಂದು ಅಪೇಕ್ಷಿಸುತ್ತೀರೋ? ಹಾಗಾದರೆ ನೀವು ಸರಿಯಾದದ್ದನ್ನೇ ಮಾಡಿರಿ. ಆಗ ಅಧಿಕಾರಿಗಳು ನಿಮ್ಮನ್ನು ಹೊಗಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಟ್ಟಕೆಲಸ ಮಾಡುವವನಿಗೆ ಅಧಿಪತಿಯಿಂದ ಭಯವಿರುವುದೇ ಹೊರತು ಒಳ್ಳೆಕೆಲಸ ಮಾಡುವವನಿಗೆ ಭಯವೇನೂ ಇರುವುದಿಲ್ಲ. ನೀನು ಅಧಿಕಾರಿಗೆ ಭಯಪಡದೇ ಇರಬೇಕೆಂದು ಅಪೇಕ್ಷಿಸುತ್ತೀಯೋ ಒಳ್ಳೆಯದನ್ನು ಮಾಡು. ಆಗ ಆ ಅಧಿಕಾರಿಯೇ ನಿನ್ನನ್ನು ಹೊಗಳುವನು.
Kannada BSI Bible 2016
ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಟ್ಟಕೆಲಸ ಮಾಡುವವನಿಗೆ ಅಧಿಪತಿಯಿಂದ ಭಯವಿರುವದೇ ಹೊರತು ಒಳ್ಳೇ ಕೆಲಸ ಮಾಡುವವನಿಗೆ ಭಯವೇನೂ ಇಲ್ಲ. ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೇದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗಳಿಕೆಯುಂಟಾಗುವದು;
Kannada Bible (KNCL) BSI 2016
ಕೆಟ್ಟದ್ದನ್ನು ಮಾಡುವವನೇ ಹೊರತು ಒಳ್ಳೆಯದನ್ನು ಮಾಡುವವನು ಅಧಿಕಾರಿಗೆ ಭಯಪಡಬೇಕಾಗಿಲ್ಲ. ಅಧಿಕಾರಿಯ ಮುಂದೆ ನಿರ್ಭಯನಾಗಿರಲು ನಿನಗೆ ಇಷ್ಟವಿದ್ದರೆ ಒಳ್ಳೆಯದನ್ನೇ ಮಾಡುತ್ತಿರು. ಆಗ ಆತನು ನಿನ್ನನ್ನು ಪ್ರಶಂಶಿಸುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆಟ್ಟದ್ದನ್ನು ಮಾಡುವವನಿಗೆ ಅಧಿಪತಿಗಳ ಭಯವಿರುವುದೇ ಹೊರತು, ಒಳ್ಳೆಯದನ್ನು ಮಾಡುವವನಿಗೆ ಅಲ್ಲ. ಅಧಿಕಾರಿಗಳಿಗೆ ಭಯಪಡಬಾರದೇ? ಒಳ್ಳೆಯದನ್ನು ಮಾಡು. ಅದರಿಂದ ನಿನಗೆ ಪ್ರಶಂಸೆ ದೊರಕುವುದು.