Romans 13:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಧಿಕಾರಿಯು ನಿಮ್ಮ ಒಳ್ಳೆಯದಕ್ಕಾಗಿ ನೇಮಕಗೊಂಡಿರುವ ದೇವರ ಸೇವಕನಾಗಿದ್ದಾನೆ. ಆದರೆ ನೀವು ಕೆಟ್ಟದ್ದನ್ನು ಮಾಡಿದರೆ ಭಯಪಡಲೇಬೇಕು. ನಿಮ್ಮನ್ನು ದಂಡಿಸಲು ಅವನಿಗೆ ಅಧಿಕಾರವಿದೆ. ಅವನು ಆ ಅಧಿಕಾರವನ್ನು ಉಪಯೋಗಿಸುವನು. ಅಧಿಕಾರಿಯು ಕೆಟ್ಟದ್ದನ್ನು ಮಾಡುವ ಜನರನ್ನು ದಂಡಿಸುವುದಕ್ಕಾಗಿ ನೇಮಕಗೊಂಡಿರುವ ದೇವರ ಸೇವಕನಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ. ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು. ಅವನು ಸುಮ್ಮನೆ ಕೈಯಲ್ಲಿ ಅಧಿಕಾರದ ದಂಡವನ್ನು ಹಿಡಿದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಮಾಡುವವನಿಗೆ ದೇವರ ದಂಡನೆಯನ್ನು ವಿಧಿಸುತ್ತಾನೆ.
Kannada BSI Bible 2016
ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ; ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದಂಡನೆಯನ್ನು ವಿಧಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ. ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದೇವರ ದಂಡನೆಯನ್ನು ವಿಧಿಸುತ್ತಾನೆ.
Kannada Bible (KNCL) BSI 2016
ಆತನು ನಿನ್ನ ಹಿತಕ್ಕಾಗಿ ದೇವರಿಂದ ನೇಮಕಗೊಂಡ ದಾಸನಾಗಿದ್ದಾನೆ. ಆದರೆ ನೀನು ಕೆಟ್ಟದ್ದನ್ನು ಮಾಡಿದೆ ಆದರೆ ಭಯಪಡಲೇಬೇಕು. ಏಕೆಂದರೆ, ಆತನ ಕೈಯಲ್ಲಿರುವ ಅಧಿಕಾರದಂಡವು ವ್ಯರ್ಥವಾದುದೇನೂ ಅಲ್ಲ. ದೇವರ ದಾಸನಾಗಿರುವ ಆತನು ಕೆಟ್ಟದ್ದನ್ನು ಮಾಡುವವರಿಗೆ ದೇವರದಂಡನೆಯನ್ನು ವಿಧಿಸುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ಅವನು ನಿನಗೆ ಒಳ್ಳೆಯದನ್ನು ಮಾಡುವುದಕ್ಕೋಸ್ಕರ ಇರುವ ದೇವರ ಸೇವಕನಾಗಿರುತ್ತಾನೆ. ಆದರೆ ನೀನು ಕೆಟ್ಟದ್ದನ್ನು ಮಾಡುವವನಾಗಿದ್ದರೆ ಭಯಪಡಬೇಕು. ಏಕೆಂದರೆ ಅವನು ವ್ಯರ್ಥವಾಗಿ ಅಧಿಕಾರವನ್ನು ಪಡೆದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಅಭ್ಯಾಸ ಮಾಡುವವನಿಗೆ ದಂಡನೆಯನ್ನು ವಿಧಿಸುತ್ತಾನೆ.