Romans 13:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಯಾರ್ಯಾರಿಗೆ ಏನೇನು ಕೊಡಬೇಕೊ ಅದನ್ನೆಲ್ಲಾ ಅವರಿಗೆ ಕೊಡಿರಿ. ಯಾವ ತೆರಿಗೆಯನ್ನಾದರೂ ಕೊಡಬೇಕಿದ್ದರೆ ಅದನ್ನು ಕೊಟ್ಟುಬಿಡಿರಿ. ಯಾರಿಗೆ ಗೌರವ ಕೊಡಬೇಕೊ ಅವರಿಗೆ ಗೌರವ ಕೊಡಿರಿ. ಯಾರಿಗೆ ಮರ್ಯಾದೆ ತೋರಿಸಬೇಕೊ ಅವರಿಗೆ ಮರ್ಯಾದೆಯನ್ನು ತೋರಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು ಸಲ್ಲಿಸಿರಿ. ಯಾರಿಗೆ ಭಯಪಡಬೇಕೋ ಅವರಿಗೆ ಭಯಪಡಿರಿ ಯಾರಿಗೆ ಮರ್ಯಾದೆ ತೋರಿಸಬೇಕೋ ಅವರಿಗೆ ಗೌರವವನ್ನು ಸಲ್ಲಿಸಿರಿ.
Kannada BSI Bible 2016
ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆಯನ್ನು ಸಲ್ಲಿಸಿರಿ.
Kannada Bible (KNCL) BSI 2016
ಆದ್ದರಿಂದ ಸಲ್ಲಿಸಬೇಕಾದುದನ್ನು ಅವರಿಗೆ ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು, ಯಾರಿಗೆ ವಿಧೇಯತೆಯೋ ಅವರಿಗೆ ವಿಧೇಯತೆಯನ್ನು, ಯಾರಿಗೆ ಗೌರವವೋ ಅವರಿಗೆ ಗೌರವವನ್ನು ಸಲ್ಲಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಯಾರಿಗೆ ಏನು ಸಲ್ಲಿಸಬೇಕೋ ಅದನ್ನು ಸಲ್ಲಿಸಿರಿ. ತೆರಿಗೆ ಕಟ್ಟಬೇಕಾಗಿದ್ದರೆ ತೆರಿಗೆಯನ್ನು, ಸುಂಕ ಕೊಡಬೇಕಾಗಿದ್ದರೆ ಸುಂಕವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆಯನ್ನು, ಗೌರವ ಸಲ್ಲಿಸಬೇಕಾಗಿದ್ದರೆ ಗೌರವವನ್ನು ಸಲ್ಲಿಸಿರಿ.