Romans 13:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಕೆಂದರೆ, “ವ್ಯಭಿಚಾರ ಮಾಡಕೂಡದು; ಕೊಲೆ ಮಾಡಕೂಡದು; ಕದಿಯಕೂಡದು; ಇತರರಿಗೆ ಸೇರಿದ ವಸ್ತುಗಳನ್ನು ಅಪೇಕ್ಷಿಸಕೂಡದು; ಎಂಬ ಒಂದೇ ಆಜ್ಞೆಯಲ್ಲಿ ಅಡಕವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೇಗೆಂದರೆ “ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು.” ಈ ಮೊದಲಾದ ಎಲ್ಲಾ ಕಟ್ಟಳೆಗಳು “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ಒಂದೇ ಮಾತಿನಲ್ಲಿ ಅಡಕವಾಗಿದೆ.
Kannada BSI Bible 2016
ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು - ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.
Kannada Bible (KNCL) BSI 2016
“ವ್ಯಭಿಚಾರ ಮಾಡಬೇಡ, ಕೊಲಬೇಡ, ಕಳಬೇಡ, ದುರಾಶೆ ಪಡಬೇಡ,” - ಈ ಮುಂತಾದ ಆಜ್ಞೆಗಳೆಲ್ಲವೂ “ನೀನು ನಿನ್ನನ್ನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನೂ ಪ್ರೀತಿಸು,” ಎಂಬ ಒಂದೇ ಆಜ್ಞೆಯಲ್ಲಿ ಅಡಗಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, “ವ್ಯಭಿಚಾರ ಮಾಡಬೇಡ, ಕೊಲೆ ಮಾಡಬೇಡ, ಕದಿಯಬೇಡ, ದುರಾಶೆ ಪಡಬೇಡ,” ಎನ್ನುವ ಹಾಗೂ ಇತರ ಯಾವ ಆಜ್ಞೆಗಳೇ ಇರಲಿ ಅವೆಲ್ಲವೂ, “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು,” ಎಂಬ ಒಂದೇ ಮಾತಿನಲ್ಲಿವೆ.