Romans 14:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗಿರಲು, ಕ್ರಿಸ್ತನಲ್ಲಿ ನಿನ್ನ ಸಹೋದರನಾಗಿರುವವನನ್ನು ನೀನು ಟೀಕಿಸುವುದೇಕೆ? ನೀನು ನಿನ್ನ ಸಹೋದರಿನಿಗಿಂತಲೂ ಉತ್ತಮನೆಂದು ಯೋಚಿಸುವುದೇಕೆ? ನಾವೆಲ್ಲರೂ ದೇವರ ಮುಂದೆ ನಿಂತುಕೊಳ್ಳುವೆವು, ಆಗ ಆತನು ನಮ್ಮೆಲ್ಲರಿಗೂ ತೀರ್ಪು ಕೊಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವುದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವುದೇನು? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕು.
Kannada BSI Bible 2016
ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವದೇನು? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕಲ್ಲಾ.
Kannada Bible (KNCL) BSI 2016
ಹೀಗಿರುವಲ್ಲಿ ಸಸ್ಯಾಹಾರಿಯೇ, ನೀನು ನಿನ್ನ ಸಹೋದರನನ್ನು ದೋಷಿಯೆಂದು ತೀರ್ಪಿಡುವುದೇಕೆ? ಮಾಂಸಹಾರಿಯೇ, ನಿನ್ನ ಸಹೋದರನನ್ನು ಹೀನೈಸುವುದೇಕೆ? ನಾವೆಲ್ಲರೂ ದೇವರ ನ್ಯಾಯಸ್ಥಾನದ ಮುಂದೆ ನಿಲ್ಲಬೇಕಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವಾಗ, ನೀನು ಏಕೆ ನಿನ್ನ ಸಹೋದರರಿಗೆ ತೀರ್ಪುಮಾಡುತ್ತೀ? ಅಥವಾ ನಿನ್ನ ಸಹೋದರರನ್ನು ಏಕೆ ಹೀನಾಯವಾಗಿ ಕಾಣುತ್ತೀ? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲುವೆವು.