Romans 14:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೌದು, ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪವಿತ್ರ ಶಾಸ್ತ್ರದಲ್ಲಿ: “ನಾನು ಜೀವಿಸುವುದರಿಂದ ಪ್ರತಿಯೊಬ್ಬನೂ ನನ್ನ ಮುಂದೆ ಮೊಣಕಾಲೂರುವನು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಆರಿಕೆಮಾಡುವರು ಎಂದು ಕರ್ತನು ಹೇಳುತ್ತಾನೆ” ಎಂದು ಬರೆದಿದೆ.
Kannada BSI Bible 2016
ನನ್ನ ಜೀವದಾಣೆ, ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು ಮತ್ತು ಪ್ರತಿಯೊಂದು ನಾಲಿಗೆಯು ದೇವರಿಗೆ ಅರಿಕೆ ಮಾಡುವದು ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಬರೆದದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಜೀವದಾಣೆ, ಎಲ್ಲರೂ ನನಗೆ ಅಡ್ಡ ಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆ ಮಾಡುವರು ಎಂಬದಾಗಿ ಕರ್ತನು ಹೇಳಿದ್ದಾನೆ ಎಂದು ಬರೆದದೆ.
Kannada Bible (KNCL) BSI 2016
ಪವಿತ್ರಗ್ರಂಥದಲ್ಲಿ: ಎಲ್ಲರೂ ನನಗೆ ಸಾಷ್ಟಾಂಗವೆರಗುವರು ಎಲ್ಲರೂ ನನ್ನನ್ನು ದೇವರೆಂದು ನಿವೇದಿಸುವರು ಇದಕ್ಕೆ ಜೀವಸ್ವರೂಪನಾದ ನಾನೇ ಸಾಕ್ಷಿ,” ಎಂದು ಸರ್ವೇಶ್ವರಸ್ವಾಮಿ ಹೇಳಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ ‘ನಾನು ಜೀವಿಸುವುದರಿಂದ, ಪ್ರತಿಯೊಬ್ಬರೂ ನನ್ನ ಮುಂದೆ ಮೊಣಕಾಲೂರುವರು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಅರಿಕೆ ಮಾಡುವುದು,’ ಎಂದು ಕರ್ತನು ಹೇಳುತ್ತಾರೆ.”