Romans 14:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ, ನಾವು ಒಬ್ಬರಿಗೊಬ್ಬರು ತೀರ್ಪುಕೊಡುವುದನ್ನು ಬಿಟ್ಟುಬಿಡಬೇಕು. ನಮ್ಮ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಬಲಹೀನಗೊಳಿಸುವಂಥ ಅಥವಾ ಪಾಪಕ್ಕೆ ಬೀಳಿಸುವಂಥ ಯಾವುದನ್ನೇ ಆಗಲಿ ಮಾಡದಂತೆ ನಾವು ನಿರ್ಧರಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ, ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ, ಅಡೆತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.
Kannada BSI Bible 2016
ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದ ಲ್ಲೊಬ್ಬರು ಎಂದಿಗೂ ತೀರ್ಪು ಮಾಡದೆ ಇರೋಣ; ಇದಲ್ಲದೆ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡೆತಡೆಯನ್ನಾಗಲಿ ಹಾಕಲೇಬಾರದೆಂದು ತೀರ್ಮಾನಿ ಸಿಕೊಳ್ಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.
Kannada Bible (KNCL) BSI 2016
ಆದಕಾರಣ ಒಬ್ಬರ ವಿಷಯದಲ್ಲಿ ಒಬ್ಬರು ತೀರ್ಪುಮಾಡದೆ ಇರೋಣ. ಬದಲಾಗಿ ಸಹೋದರನಿಗೆ ಯಾವ ರೀತಿಯ ಅಡ್ಡಿಯನ್ನಾಗಲೀ ಅಡಚಣೆಗಳನ್ನಾಗಲೀ ಉಂಟುಮಾಡುವುದಿಲ್ಲವೆಂದು ತೀರ್ಮಾನಿಸಿಕೊಳ್ಳಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನಾವು ಒಬ್ಬರ ಮೇಲೊಬ್ಬರು ತೀರ್ಪುಮಾಡದಿರೋಣ. ಇದಲ್ಲದೆ ಸಹೋದರರಿಗೆ ಅಡೆತಡೆಯನ್ನಾಗಲಿ, ಅಡ್ಡಿಯನ್ನಾಗಲಿ, ಹಾಕದಿರೋಣ.