Romans 14:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ರೀತಿಯಲ್ಲಿ ಕ್ರಿಸ್ತನ ಸೇವೆಮಾಡುವವನು ದೇವರನ್ನು ಮೆಚ್ಚಿಸುವವನಾಗಿದ್ದಾನೆ. ಜನರೂ ಅವನನ್ನು ಸ್ವೀಕರಿಸಿಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಪ್ರಕಾರವಾಗಿ ಕ್ರಿಸ್ತನ ಸೇವೆಯನ್ನು ಮಾಡುವವನು ದೇವರನ್ನು ಮೆಚ್ಚಿಸುವವನೂ, ಮನುಷ್ಯರಿಗೆ ಒಳ್ಳೆಯದನ್ನು ಮಾಡುವವನೂ ಆಗಿರಲಿ.
Kannada BSI Bible 2016
ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಪ್ರಕಾರವಾಗಿ ಕ್ರಿಸ್ತನ ಸೇವೆಯನ್ನು ಮಾಡುವವನು ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.
Kannada Bible (KNCL) BSI 2016
ಹೀಗೆ ಕ್ರಿಸ್ತಯೇಸುವಿಗೆ ಸೇವೆಮಾಡುವವನು, ದೇವರಿಂದ ಮೆಚ್ಚುಗೆಯನ್ನು ಮತ್ತು ಮನುಷ್ಯರಿಂದ ಮಾನ್ಯತೆಯನ್ನು ಪಡೆಯುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ರೀತಿಯಲ್ಲಿ ಕ್ರಿಸ್ತನಿಗೆ ಸೇವೆಮಾಡುವವರು ದೇವರಿಗೆ ಮೆಚ್ಚುಗೆಯಾದವರೂ ಜನರಿಂದ ಅನುಮೋದನೆ ಹೊಂದಿದವರೂ ಆಗಿರುತ್ತಾರೆ.