Romans 14:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲ್ಲಾ ಆಹಾರಪದಾರ್ಥಗಳು ಶುದ್ಧವಾಗಿವೆ ಮತ್ತು ತಿನ್ನಲು ಯೋಗ್ಯವಾಗಿವೆ. ಆದರೆ ಒಬ್ಬನು ತಾನು ತಿನ್ನುವ ಆಹಾರಪದಾರ್ಥದ ಮೂಲಕ ಮತ್ತೊಬ್ಬ ವ್ಯಕ್ತಿಯನ್ನು ಪಾಪಕ್ಕೆ ಬೀಳಿಸುವುದಾಗಿದ್ದರೆ, ಅವನು ಆ ಪದಾರ್ಥವನ್ನು ತಿನ್ನುವುದೇ ತಪ್ಪು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಕಟ್ಟಿದ್ದನ್ನು ನೀನು ಆಹಾರದ ನಿಮಿತ್ತವಾಗಿ ಕೆಡವಬೇಡ. ಎಲ್ಲಾ ಪದಾರ್ಥಗಳೂ ಶುದ್ಧವೇ; ಆದರೆ ತಿಂದು ಮತ್ತೊಬ್ಬರಿಗೆ ವಿಘ್ನವನ್ನುಂಟುಮಾಡುವುದು ಕೆಟ್ಟದ್ದು.
Kannada BSI Bible 2016
ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಕಟ್ಟಿದ್ದನ್ನು ನೀನು ಆಹಾರದ ನಿವಿುತ್ತವಾಗಿ ಕೆಡವಬೇಡ. ಎಲ್ಲಾ ಪದಾರ್ಥಗಳೂ ಶುದ್ಧವೇ; ಆದರೆ ತಿಂದು ಮತ್ತೊಬ್ಬರಿಗೆ ವಿಘ್ನವನ್ನುಂಟುಮಾಡುವದು ಕೆಟ್ಟದ್ದು.
Kannada Bible (KNCL) BSI 2016
ಕೇವಲ ಆಹಾರಕ್ಕಾಗಿ, ದೇವರು ಕಟ್ಟಿದ್ದನ್ನು ನೀನು ಕೆಡವಬೇಡ. ಆಹಾರಪದಾರ್ಥಗಳೆಲ್ಲಾ ಒಳ್ಳೆಯವೇ. ಆದರೆ ಅವುಗಳಲ್ಲಿ ಯಾವುದಾದರೂ ಒಂದನ್ನು ತಿನ್ನುವುದರಿಂದ ಮತ್ತೊಬ್ಬನಿಗೆ ವಿಘ್ನವನ್ನು ಒಡ್ಡುವುದಾದರೆ, ಅದು ತಪ್ಪು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಹಾರದ ನಿಮಿತ್ತವಾಗಿ ದೇವರ ಕೆಲಸವನ್ನು ಕೆಡಿಸಬೇಡ, ಎಲ್ಲಾ ಆಹಾರವೂ ಶುದ್ಧವಾದದ್ದೇ. ಆದರೆ ಒಬ್ಬರು ತಿಂದು ವಿಘ್ನವನ್ನು ಒಡ್ಡುವುದು ಕೆಟ್ಟದ್ದು.