Romans 14:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಒಬ್ಬನು ತಾನು ತಿನ್ನುವ ಪದಾರ್ಥದಲ್ಲಿ ದೋಷವಿಲ್ಲ ಎಂಬ ದೃಢನಂಭಿಕೆಯಿಲ್ಲದೆ ತಿಂದರೆ, ಅವನು ತನ್ನನ್ನೇ ತಪ್ಪಿತಸ್ಥನನಾಗಿ ಮಾಡಿಕೊಳ್ಳುತ್ತಾನೆ. ಏಕೆಂದರೆ ಅದು ದೋಷರಹಿತವಾದದ್ದು ಎಂಬ ನಂಬಿಕೆ ಅವನಲ್ಲಿಲ್ಲ. ನಂಬಿಕೆಯ ಆಧಾರವಿಲ್ಲದೆ ಮಾಡುವುದೆಲ್ಲವೂ ಪಾಪವೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಂಶಯಪಟ್ಟು ಊಟಮಾಡುವವನು ಸಂಶಯದಿಂದ ತಿನ್ನುವ ಕಾರಣ ತನ್ನ ಊಟದ ವಿಷಯದಲ್ಲಿ ನಂಬಿಕೆಯಿಲ್ಲದೆ ದೋಷಿಯಾಗಿದ್ದಾನೆ. ನಂಬಿಕೆಯ ಆಧಾರವಿಲ್ಲದಿರುವುದೆಲ್ಲವೂ ಪಾಪವೇ ಆಗಿದೆ.
Kannada BSI Bible 2016
ಸಂಶಯಪಟ್ಟು ಉಣ್ಣುವವನು ದಂಡಿಸಲ್ಪಡುವನು; ಯಾಕಂದರೆ ಅವನು ನಂಬಿಕೆಯಿಂದ ಉಣ್ಣುವದಿಲ್ಲ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಂಶಯಪಟ್ಟು ಉಣ್ಣುವವನು ಸಂಶಯದಿಂದ ಉಣ್ಣುವ ಕಾರಣ ದೋಷಿಯಾಗಿದ್ದಾನೆ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.
Kannada Bible (KNCL) BSI 2016
ಅನುಮಾನದಿಂದ ಊಟಮಾಡುವವನು ದೇವರ ಮುಂದೆ ಅಪರಾಧಿಯಾಗುತ್ತಾನೆ. ಏಕೆಂದರೆ, ಅವನು ವಿಶ್ವಾಸದ ಆಧಾರದ ಮೇಲೆ ವರ್ತಿಸುತ್ತಿಲ್ಲ. ವಿಶ್ವಾಸದ ಆಧಾರವಿಲ್ಲದೆ ಮಾಡುವುದೆಲ್ಲವೂ ಪಾಪವೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅನುಮಾನವುಳ್ಳವರು ಊಟಮಾಡುವುದು ವಿಶ್ವಾಸದಿಂದ ಅಲ್ಲವಾದ್ದರಿಂದ ಅವರು ದೋಷಿಯಾಗುತ್ತಾರೆ. ವಿಶ್ವಾಸವಿಲ್ಲದೆ ಮಾಡುವ ಎಲ್ಲವೂ ಪಾಪವಾಗಿವೆ.