Romans 14:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ಹೆಚ್ಚು ಮುಖ್ಯವೆಂದು ನಂಬಬಹುದು. ಆದರೆ ಇನ್ನೊಬ್ಬನು ಎಲ್ಲಾ ದಿನಗಳು ಒಂದೇ ಎಂದು ನಂಬಬಹುದು. ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಸ್ವಂತ ಮನಸ್ಸಿನಲ್ಲಿರುವ ತನ್ನ ಸ್ವಂತ ನಂಬಿಕೆಯ ಬಗ್ಗೆ ನಿಶ್ಚಯದಿಂದಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ವಿಶೇಷವೆಂದೆಣಿಸುತ್ತಾನೆ; ಮತ್ತೊಬ್ಬನು ಎಲ್ಲಾ ದಿನಗಳನ್ನೂ ವಿಶೇಷವೆಂದೆಣಿಸುತ್ತಾನೆ; ಪ್ರತಿಯೊಬ್ಬನು ತನ್ನ ತನ್ನ ಮನಸ್ಸಿನಲ್ಲಿ ಚಂಚಲಪಡದೆ ದೃಢವಾಗಿರಲಿ.
Kannada BSI Bible 2016
ಒಬ್ಬನು ಒಂದು ದಿವಸಕ್ಕಿಂತ ಮತ್ತೊಂದು ದಿವಸವನ್ನು ವಿಶೇಷವೆಂದು ಎಣಿಸುತ್ತಾನೆ. ಮತ್ತೊಬ್ಬನು ಎಲ್ಲಾ ದಿವಸಗಳನ್ನೂ ಒಂದೇ ರೀತಿಯಾಗಿ ಎಣಿಸುತ್ತಾನೆ; ಹೀಗಿರಲಾಗಿ ಪ್ರತಿಯೊಬ್ಬನು ತನ್ನ ಮನಸ್ಸಿ ನಲ್ಲಿ ನಿಶ್ಚಯಿಸಿಕೊಂಡಿರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ವಿಶೇಷವೆಂದೆಣಿಸುತ್ತಾನೆ; ಮತ್ತೊಬ್ಬನು ಎಲ್ಲಾ ದಿವಸಗಳನ್ನೂ ವಿಶೇಷವೆಂದೆಣಿಸುತ್ತಾನೆ; ಪ್ರತಿಯೊಬ್ಬನು ತನ್ನ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಿರಬೇಕು.
Kannada Bible (KNCL) BSI 2016
ಒಂದು ದಿನಕ್ಕಿಂತ ಮತ್ತೊಂದು ದಿನ ಮಂಗಳಕರವಾದುದು ಎಂದು ಒಬ್ಬನು ಭಾವಿಸಬಹುದು. ಮತ್ತೊಬ್ಬನು, ಎಲ್ಲಾ ದಿನಗಳು ಮಂಗಳಕರವಾದುವು ಎಂದು ಹೇಳಬಹುದು. ಈ ವಿಷಯದಲ್ಲಿ ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಂತೆ ನಡೆಯಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆಲವರು ಒಂದು ದಿನವನ್ನು ಮತ್ತೊಂದು ದಿನಕ್ಕಿಂತ ವಿಶೇಷವೆಂದು ಎಣಿಸುತ್ತಾರೆ. ಪ್ರತಿಯೊಬ್ಬರೂ ತಮ್ಮ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಂತೆ ನಡೆಯಲಿ.