Romans 14:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ಮುಖ್ಯವೆಂದು ಯೋಚಿಸುವ ವ್ಯಕ್ತಿಯು ಪ್ರಭುವಿಗೋಸ್ಕರವಾಗಿಯೇ ಹಾಗೆ ಯೋಚಿಸುವವನಾಗಿದ್ದಾನೆ. ಅಂತೆಯೇ ಎಲ್ಲಾ ಬಗೆಯ ಆಹಾರಪದಾರ್ಥಗಳನ್ನು ತಿನ್ನುವ ವ್ಯಕ್ತಿಯು ಪ್ರಭುವಿಗೋಸ್ಕರವೇ ಅವುಗಳನ್ನು ತಿನ್ನುತ್ತಾನೆ. ಹೌದು, ಅವನು ಆ ಆಹಾರಕ್ಕಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಿನವನ್ನು ಆಚರಿಸುವವನು ಕರ್ತನಿಗಾಗಿ ಅದನ್ನು ಆಚರಿಸುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರನ್ನು ಸ್ತುತಿಸುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವರನ್ನು ಸ್ತುತಿಸುತ್ತಾನೆ.
Kannada BSI Bible 2016
ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ
Kannada BSI JV (ಕನ್ನಡ ಸತ್ಯವೇದವು J.V. (BSI))
ದಿನವನ್ನು ಗಣ್ಯಮಾಡುವವನು ಕರ್ತನಿಗಾಗಿ ಅದನ್ನು ಗಣ್ಯಮಾಡುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವಸ್ತೋತ್ರ ಮಾಡುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವಸ್ತೋತ್ರ ಮಾಡುತ್ತಾನೆ.
Kannada Bible (KNCL) BSI 2016
ಒಂದು ದಿನವನ್ನು ಮಂಗಳಕರವೆಂದು ಭಾವಿಸುವವನು ಪ್ರಭುವಿಗಾಗಿಯೇ ಆ ರೀತಿ ಭಾವಿಸುತ್ತಾನೆ. ಮಾಂಸವನ್ನು ತಿನ್ನುವವನು ಪ್ರಭುವಿಗಾಗಿಯೇ ತಿನ್ನುತ್ತಾನೆ. ಹೇಗೆಂದರೆ, ತಿನ್ನುವ ಆ ಪದಾರ್ಥಕ್ಕಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಾನೆ. ಸಸ್ಯಾಹಾರಿಯೂ ಪ್ರಭುವಿಗಾಗಿಯೇ ಮಾಂಸವನ್ನು ತಿನ್ನದೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬ ಒಂದು ದಿನವನ್ನು ವಿಶೇಷವೆಂದು ಎಣಿಸುವುದಾದರೆ ಅವನು ಅದನ್ನು ಕರ್ತನಿಗಾಗಿಯೇ ಮಾಡಲಿ. ಮಾಂಸಾಹಾರಿಯು ದೇವರಿಗೆ ಕೃತಜ್ಞತೆಯನ್ನು ಮಾಡಿ ಊಟಮಾಡುವುದಾದರೆ ಅವನು ಅದನ್ನು ಮಾಡುವುದು ಕರ್ತನಿಗಾಗಿಯೇ. ಸಸ್ಯಾಹಾರಿಯು ಕರ್ತನಿಗಾಗಿಯೇ ತಿನ್ನದೆ ಕೃತಜ್ಞತೆ ಸಲ್ಲಿಸುತ್ತಾನೆ.