Romans 15:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮ್ಮಲ್ಲಿ ಪ್ರತಿಯೊಬ್ಬರು ತಮ್ಮ ನೆರೆಯವರ ಹಿತವನ್ನು ನೋಡಿಕೊಳ್ಳಬೇಕು. ನಂಬಿಕೆಯಲ್ಲಿ ಬಲಹೀನರಾಗಿರುವವರನ್ನು ಬಲಗೊಳಿಸಲು ನೆರವಾಗಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹಿತವನ್ನೂ, ಭಕ್ತಿವೃದ್ಧಿಯನ್ನೂ ಅಪೇಕ್ಷಿಸುವವನಾಗಿ ಅವನನ್ನು ಮೆಚ್ಚಿಸಬೇಕು.
Kannada BSI Bible 2016
ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಭಕ್ತಿ ವೃದ್ಧಿಯ ಹಿತಕ್ಕಾಗಿ ಅವನನ್ನು ಸಂತೋಷಪಡಿಸಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹಿತವನ್ನೂ ಭಕ್ತಿವೃದ್ಧಿಯನ್ನೂ ಅಪೇಕ್ಷಿಸುವವನಾಗಿ ಅವನ ಸುಖವನ್ನು ನೋಡಿಕೊಳ್ಳಲಿ.
Kannada Bible (KNCL) BSI 2016
ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹಿತವನ್ನೇ ಬಯಸಿ, ವಿಶ್ವಾಸದಲ್ಲಿ ಅವನು ಮತ್ತಷ್ಟು ಪ್ರವರ್ಧಿಸುವಂತೆ ನೆರವಾಗಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮಲ್ಲಿ ಪ್ರತಿಯೊಬ್ಬರು ತಮ್ಮ ನೆರೆಯವರ ಭಕ್ತಿವೃದ್ಧಿಯ ಹಿತಕ್ಕಾಗಿ ಅವರನ್ನು ಸುಖವನ್ನು ನೋಡಿಕೊಳ್ಳಲಿ.