Romans 15:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಈಗ ಈ ಪ್ರಾಂತ್ಯಗಳಲ್ಲಿ ನಾನು ಮಾಡಬೇಕಾಗಿದ್ದ ಸೇವೆಯನ್ನು ಮಾಡಿ ಮುಗಿಸಿದ್ದೇನೆ. ಅನೇಕ ವರ್ಷಗಳಿಂದ ನಾನು ನಿಮ್ಮ ಬಳಿಗೆ ಬರಬೇಕೆಂದಿದ್ದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಇನ್ನು ಮೇಲೆ ಈ ಪ್ರಾಂತ್ಯಗಳಲ್ಲಿ ನನಗೆ ಸ್ಥಳವಿಲ್ಲದ್ದರಿಂದಲೂ ನಿಮ್ಮ ಬಳಿಗೆ ಬರುವುದಕ್ಕೆ ಅನೇಕ ವರ್ಷಗಳಿಂದ ಆಸಕ್ತಿ ಇದ್ದುದರಿಂದಲೂ
Kannada BSI Bible 2016
ಆದರೆ ಈ ಪ್ರದೇಶಗಳಲ್ಲಿ ಸೇವೆಗೆ ಇನ್ನೂ ಸ್ಥಳವಿಲ್ಲದ ಕಾರಣ ನಿಮ್ಮ ಬಳಿಗೆ ಬರಬೇಕೆಂದು ಅನೇಕ ವರುಷಗಳಿಂದ ನನಗೆ ಬಹಳ ಅಭಿಲಾಷೆಯಿರುವದರಿಂದ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಇನ್ನು ಮೇಲೆ ಈ ಪ್ರಾಂತ್ಯಗಳಲ್ಲಿ ನನಗೆ ಅನುಕೂಲವಿಲ್ಲದ್ದರಿಂದಲೂ ನಿಮ್ಮ ಬಳಿಗೆ ಬರುವದಕ್ಕೆ ಅನೇಕ ವರುಷಗಳಿಂದ ಅಭಿಲಾಷೆ ಇರುವದರಿಂದಲೂ
Kannada Bible (KNCL) BSI 2016
ಆದರೆ ಈಗ ಈ ಪ್ರಾಂತ್ಯಗಳಲ್ಲಿ ನಾನು ಮಾಡಬೇಕಾಗಿದ್ದ ಸೇವೆಯನ್ನು ಮುಗಿಸಿದ್ದೇನೆ. ಅನೇಕ ವರ್ಷಗಳಿಂದ ನಿಮ್ಮ ಬಳಿಗೆ ಬರಬೇಕೆಂದಿದ್ದ ನನ್ನ ಹಂಬಲವು ಈಗ ಕೈಗೂಡಲಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗಲಾದರೋ ಈ ಪ್ರದೇಶದಲ್ಲಿ ನನಗೆ ಅವಕಾಶವಿಲ್ಲದಿರುವುದರಿಂದಲೂ ಅನೇಕ ವರ್ಷಗಳಿಂದ ನಿಮ್ಮನ್ನು ಸಂದರ್ಶಿಸಬೇಕೆಂಬ ಹಂಬಲವಿರುವುದರಿಂದಲೂ