Romans 15:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜೆರುಸಲೇಮಿನ ಬಡಜನರಿಗೋಸ್ಕರ ಕೊಟ್ಟಿರುವ ಈ ಹಣವನ್ನೆಲ್ಲಾ ಸುರಕ್ಷಿತವಾಗಿ ಅವರಿಗೆ ತಲುಪಿಸಿದ ಮೇಲೆ ನಾನು ಸ್ಪೇನಿಗೆ ಹೊರಡುವೆನು. ನಾನು ಸ್ಪೇನಿಗೆ ಪ್ರಯಾಣ ಮಾಡುವಾಗ (ರೋಮಿನಲ್ಲಿ) ಇಳಿದು ನಿಮ್ಮನ್ನು ಸಂದರ್ಶಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಈ ಕೆಲಸವನ್ನು ಮುಗಿಸಿಕೊಂಡು ಈ ಪ್ರೀತಿಯ ಫಲವನ್ನು ಅಲ್ಲಿಯವರ ವಶಕ್ಕೆ ಸಂಪೂರ್ಣವಾಗಿ ಕೊಟ್ಟ ಮೇಲೆ ನಿಮ್ಮ ಮಾರ್ಗವಾಗಿ ಸ್ಪೇನ್ ದೇಶಕ್ಕೆ ಹೋಗುವೆನು.
Kannada BSI Bible 2016
ನಾನು ಈ ಕೆಲಸವನ್ನು ತೀರಿಸಿಕೊಂಡು ಈ ಫಲವನ್ನು ಭದ್ರವಾಗಿ ಅಲ್ಲಿಯವರ ವಶಕ್ಕೆ ಕೊಟ್ಟಮೇಲೆ ನಿಮ್ಮ ಮಾರ್ಗವಾಗಿ ಸ್ಪೇನಿಗೆ ಬರುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಈ ಕೆಲಸವನ್ನು ತೀರಿಸಿಕೊಂಡು ಈ ಪ್ರೀತಿಯ ಫಲವನ್ನು ಅಲ್ಲಿಯವರ ವಶಕ್ಕೆ ಯಥಾಕ್ರಮವಾಗಿ ಕೊಟ್ಟ ಮೇಲೆ ನಿಮ್ಮ ಮಾರ್ಗವಾಗಿ ಸ್ಪೇನ್ ದೇಶಕ್ಕೆ ಹೋಗುವೆನು.
Kannada Bible (KNCL) BSI 2016
ದೇವಜನರಿಗೆ ಸಂಗ್ರಹಿಸಲಾದ ಧನಸಹಾಯವನ್ನು ಸುರಕ್ಷಿತವಾಗಿ ಅವರಿಗೆ ತಲುಪಿಸಿದ ಮೇಲೆ ನನ್ನ ಈ ಕಾರ್ಯವನ್ನು ಮುಗಿಸಿಕೊಂಡು ಸ್ಪೇಯಿನ್ ದೇಶಕ್ಕೆ ಹೋಗುವ ಮಾರ್ಗದಲ್ಲಿ ನಿಮ್ಮ ಬಳಿಗೆ ಬರುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಈ ಕೆಲಸವನ್ನು ಪೂರೈಸಿ ಸಂಗ್ರಹಿಸಿ ಕೊಟ್ಟದ್ದನ್ನು ಅವರಿಗೆ ಒಪ್ಪಿಸಿ ಖಚಿತವಾದ ಬಳಿಕ, ನಾನು ಸ್ಪೇನ್ ದೇಶಕ್ಕೆ ಹೋಗುವ ದಾರಿಯಲ್ಲಿ ನಿಮ್ಮನ್ನು ಸಂದರ್ಶಿಸುತ್ತೇನೆ.