Romans 15:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕ್ರಿಸ್ತನು ಸಹ ತನ್ನ ಜೀವಮಾನದಲ್ಲಿ ತನ್ನ ಹಿತಕ್ಕಾಗಿ ಪ್ರಯತ್ನಿಸಲಿಲ್ಲ. “ನಿನಗೆ ಅವಮಾನ ಮಾಡಿದ ಜನರು ನನಗೂ ಅವಮಾನ ಮಾಡಿದರು” ಎಂಬುದಾಗಿ ಆತನ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆಯಲ್ಪಟ್ಟಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೆಂದರೆ ಕ್ರಿಸ್ತನು ಸಹ ತನ್ನ ಹಿತಕ್ಕಾಗಿ ಚಿಂತಿಸಲಿಲ್ಲ. “ದೇವರೇ ನಿನ್ನನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೂ ಬಂದವು” ಎಂದು ಬರೆದಿದೆಯಲ್ಲಾ.
Kannada BSI Bible 2016
ಆದರೆ--ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಿದ್ದವು ಎಂಬದಾಗಿ ಬರೆಯಲ್ಪಟ್ಟಂತೆ ಕ್ರಿಸ್ತ ನಾದರೋ ತನ್ನನ್ನು ತಾನು ಸಂತೋಷಪಡಿಸಿಕೊಳ್ಳಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಕ್ರಿಸ್ತನು ಸಹ ತನ್ನ ಸುಖವನ್ನು ನೋಡಿಕೊಳ್ಳಲಿಲ್ಲ. ದೇವರೇ, ನಿನ್ನನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೆ ಬಂದವು ಎಂಬದಾಗಿ ಬರೆದಿರುವಂತೆ ಆತನಿಗೆ ಸಂಭವಿಸಿತಲ್ಲಾ.
Kannada Bible (KNCL) BSI 2016
ಕ್ರಿಸ್ತಯೇಸು ತಮ್ಮ ಸ್ವಂತ ಹಿತವನ್ನು ಎಂದಿಗೂ ಬಯಸಲಿಲ್ಲ. “ದೇವರೇ, ನಿಮ್ಮನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೆ ಎರಗಿವೆ,” ಎಂದು ಲಿಖಿತವಾಗಿರುವ ವಾಕ್ಯ ಅವರಿಗೆ ಅನ್ವಯಿಸುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿಮ್ಮನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಂದವು,” ಎಂದು ಬರೆದಿರುವಂತೆ ಕ್ರಿಸ್ತನು ಸಹ ತಮ್ಮ ಸುಖಕ್ಕಾಗಿ ಬಾಳಲಿಲ್ಲ.