Romans 15:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜುದೇಯದಲ್ಲಿರುವ ಅವಿಶ್ವಾಸಿಗಳ ಕೈಯಿಂದ ನಾನು ಪಾರಾಗುವಂತೆ ಪ್ರಾರ್ಥಿಸಿರಿ. ನಾನು ಜೆರುಸಲೇಮಿಗೆ ತೆಗೆದುಕೊಂಡು ಹೋಗುತ್ತಿರುವ ಈ ಸಹಾಯಧನವು ಅಲ್ಲಿರುವ ದೇವಮಕ್ಕಳಿಗೆ ಮೆಚ್ಚಿಕೆಯಾಗುವಂತೆ ಪ್ರಾರ್ಥಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ನನ್ನನ್ನು ಯೂದಾಯದಲ್ಲಿರುವ ಅವಿಧೇಯರ ಕೈಯಿಂದ ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನಾನು ಮಾಡುವಂಥ ಈ ಧರ್ಮಕಾರ್ಯವು ಅಲ್ಲಿರುವ ದೇವಜನರಿಗೆ ಹಿತಕರವಾಗಿ ತೋರಬೇಕೆಂತಲೂ ಪ್ರಾರ್ಥಿಸಿರಿ.
Kannada BSI Bible 2016
ಯೂದಾಯದಲ್ಲಿ ನಂಬದವರಿಂದ ನನ್ನನ್ನು ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನನ್ನ ಸೇವೆಯು ಆ ಪರಿಶುದ್ಧರಿಗೆ ಹಿತಕರವಾಗಿ ತೋರಬೇಕೆಂತಲೂ
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ನನ್ನನ್ನು ಯೂದಾಯದಲ್ಲಿರುವ ಅವಿಧೇಯರ ಕೈಗೆ ತಪ್ಪಿಸಬೇಕೆಂತಲೂ ಯೆರೂಸಲೇವಿುಗೋಸ್ಕರ ನಾನು ಮಾಡುವಂಥ ಈ ಧರ್ಮಕಾರ್ಯವು ಅಲ್ಲಿರುವ ದೇವಜನರಿಗೆ ಹಿತಕರವಾಗಿ ತೋರಬೇಕೆಂತಲೂ ಪ್ರಾರ್ಥಿಸಿರಿ.
Kannada Bible (KNCL) BSI 2016
ಜುದೇಯದಲ್ಲಿರುವ ಅವಿಶ್ವಾಸಿಗಳ ಕೈಯಿಂದ ನಾನು ಪಾರಾಗುವಂತೆ ಪ್ರಾರ್ಥಿಸಿರಿ; ಜೆರುಸಲೇಮಿನ ದೇವಜನರು ನನ್ನ ಸೇವೆಯನ್ನು ಸಂತೋಷದಿಂದ ಸ್ವೀಕರಿಸುವಂತೆ ಪ್ರಾರ್ಥಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಯೂದಾಯ ಪ್ರಾಂತದಲ್ಲಿ ಅವಿಶ್ವಾಸಿಗಳ ಕೈಯಿಂದ ಕಾಪಾಡಬೇಕೆಂತಲೂ ನನ್ನ ಸೇವೆಯು ಯೆರೂಸಲೇಮಿನಲ್ಲಿರುವ ದೇವಜನರಿಗೆ ಮೆಚ್ಚುಗೆಯಾಗಿರಬೇಕೆಂತಲೂ ಪ್ರಾರ್ಥಿಸಿರಿ.