Romans 15:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತಾಳ್ಮೆ ಮತ್ತು ಶಕ್ತಿ ದೇವರಿಂದ ಬರುತ್ತವೆ. ಕ್ರಿಸ್ತ ಯೇಸು ಬಯಸುವ ಮಾರ್ಗವನ್ನು ನೀವೆಲ್ಲರೂ ಒಟ್ಟಾಗಿ ಒಪ್ಪಿಕೊಳ್ಳಲು ದೇವರು ನಿಮಗೆ ಸಹಾಯ ಮಾಡಲೆಂದು ನಾನು ಪ್ರಾರ್ಥಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಕೊಡುವ ದೇವರು ನೀವು ಕ್ರಿಸ್ತ ಯೇಸುವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ನಿಮ್ಮನ್ನು ಆಶೀರ್ವದಿಸಲಿ.
Kannada BSI Bible 2016
ನೀವು ಕ್ರಿಸ್ತ ಯೇಸು ವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ತಾಳ್ಮೆಯೂ ಆದರಣೆಯೂ ಉಳ್ಳ ದೇವರು ನಿಮಗೆ ಅನುಗ್ರಹಿಸಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸ್ಥಿರಚಿತ್ತವನ್ನೂ ಆದರಣೆಯನ್ನೂ ಕೊಡುವ ದೇವರು ನೀವು ಕ್ರಿಸ್ತ ಯೇಸುವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ನಿಮಗೆ ದಯಪಾಲಿಸಲಿ.
Kannada Bible (KNCL) BSI 2016
ಆ ಸ್ಥೈರಣೆ ಮತ್ತು ಉತ್ತೇಜನದ ಮೂಲವಾಗಿರುವ ದೇವರು, ನೀವೆಲ್ಲರು ಕ್ರಿಸ್ತಯೇಸುವನ್ನು ಅನುಸರಿಸುತ್ತಾ ಒಮ್ಮನಸ್ಸಿನಿಂದ ಬಾಳುವಂತೆ ಮಾಡಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಹನೆಯನ್ನೂ ಉತ್ತೇಜನವನ್ನೂ ಕೊಡುವ ದೇವರು ನೀವು ಕ್ರಿಸ್ತ ಯೇಸುವನ್ನು ಹಿಂಬಾಲಿಸುವಂತೆ ನಿಮಗೆ ಒಂದೇ ಆತ್ಮವನ್ನು ಕೊಡಲಿ.