Romans 16:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಂಥ ಜನರು ನಮ್ಮ ಪ್ರಭುವಾದ ಕ್ರಿಸ್ತನ ಸೇವೆ ಮಾಡುತ್ತಿಲ್ಲ. ಅವರು ಕೇವಲ ತಮ್ಮ ಸುಖಕ್ಕಾಗಿ ಈ ಕಾರ್ಯಗಳನ್ನು ಮಾಡುತ್ತಿದ್ದಾರೆ. ಕೆಟ್ಟದರ ಬಗ್ಗೆ ತಿಳಿದಿಲ್ಲದ ಜನರ ಮನಸ್ಸುಗಳನ್ನು ಮೋಸಗೊಳಿಸುವುದಕ್ಕಾಗಿ ಅವರು ನಯನಾಜುಕಿನ ನುಡಿಗಳನ್ನಾಡುತ್ತಾರೆ ಮತ್ತು ಮುಖಸ್ತುತಿಯ ಮಾತುಗಳನ್ನಾಡುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
Kannada BSI Bible 2016
ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
Kannada Bible (KNCL) BSI 2016
ಅಂಥವರು ಮಾಡುವುದು ತಮ್ಮ ಉದರಸೇವೆಯನ್ನೇ ಹೊರತು ಪ್ರಭುವಿನ ಸೇವೆಯನ್ನಲ್ಲ, ತಮ್ಮ ನಯನಾಜೂಕಿನ ನುಡಿಗಳಿಂದಲೂ ಮುಖಸ್ತುತಿಯ ಮಾತುಗಳಿಂದಲೂ ನಿಷ್ಕಪಟ ಮನಸ್ಕರನ್ನು ಮರುಳುಗೊಳಿಸುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂಥಾ ಜನರು ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಸೇವೆ ಮಾಡುವವರಾಗಿರದೆ ತಮ್ಮ ಹೊಟ್ಟೆಯ ಸೇವೆ ಮಾಡುವವರಾಗಿರುತ್ತಾರೆ. ನಯವಾದ ಮತ್ತು ಮುಖಸ್ತುತಿಯ ಮಾತುಗಳಿಂದ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.