Romans 16:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ವಿಧೇಯತ್ವವು ಎಲ್ಲಾ ವಿಶ್ವಾಸಿಗಳಿಗೆ ತಿಳಿದಿದೆ. ಆದ್ದರಿಂದ ನಿಮ್ಮ ವಿಷಯದಲ್ಲಿ ನಾನು ಬಹು ಸಂತೋಷಪಡುತ್ತೇನೆ. ಆದರೆ ಒಳ್ಳೆಯ ಸಂಗತಿಗಳ ಬಗ್ಗೆ ನೀವು ವಿವೇಕಿಗಳಾಗಿರಬೇಕೆಂದು ಮತ್ತು ಕೆಟ್ಟಸಂಗತಿಗಳ ಬಗ್ಗೆ ಏನೂ ತಿಳಿದಿಲ್ಲದವರಾಗಿರಬೇಕೆಂದು ನಾನು ಅಪೇಕ್ಷಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾದದ್ದರಿಂದ ನಿಮ್ಮ ವಿಷಯದಲ್ಲಿ ಆನಂದಪಡುತ್ತೇನೆ. ನೀವು ಒಳ್ಳೆಯದನ್ನು ಮಾಡುವುದರಲ್ಲಿ ಜಾಣರೂ ಮತ್ತು ಕೆಟ್ಟತನದ ವಿಷಯದಲ್ಲಿ ಮೂರ್ಖರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.
Kannada BSI Bible 2016
ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾಗಿದ್ದದರಿಂದ ನಿಮ್ಮ ವಿಷಯದಲ್ಲಿ ನಾನು ಆನಂದಪಡುತ್ತೇನೆ. ಆದಾಗ್ಯೂ ನೀವು ಒಳ್ಳೇತನದ ವಿಷಯದಲ್ಲಿ ಜಾಣರೂ ಕೆಟ್ಟತನದ ವಿಷಯದಲ್ಲಿ ಕಳಂಕವಿಲ್ಲದವರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾದದರಿಂದ ಇದನ್ನು ಬರೆದಿದ್ದೇನೆ; ನಿಮ್ಮ ವಿಷಯದಲ್ಲಿ ಆನಂದಪಡುತ್ತೇನೆ. ನೀವು ಒಳ್ಳೇತನದ ವಿಷಯದಲ್ಲಿ ಜಾಣರೂ ಕೆಟ್ಟತನದ ವಿಷಯದಲ್ಲಿ ಕಳಂಕವಿಲ್ಲದವರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.
Kannada Bible (KNCL) BSI 2016
ನೀವು ಶುಭಸಂದೇಶಕ್ಕೆ ವಿಧೇಯರಾಗಿ ನಡೆಯುವವರೆಂಬ ಸಮಾಚಾರ ಎಲ್ಲೆಲ್ಲೂ ಹರಡಿದೆ. ಇದರಿಂದಾಗಿ ನಾನು ನಿಮ್ಮ ವಿಷಯದಲ್ಲಿ ಸಂತೋಷಪಡುತ್ತೇನೆ. ನೀವು ಒಳ್ಳೆಯ ವಿಷಯದಲ್ಲಿ ಜಾಣರೂ ಕೆಟ್ಟ ವಿಷಯದಲ್ಲಿ ಕಳಂಕರಹಿತರೂ ಆಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ವಿಧೇಯತೆಯು ಎಲ್ಲಾ ಮನುಷ್ಯರಿಗೂ ಪ್ರಸಿದ್ಧವಾಯಿತು. ಆದ್ದರಿಂದ ನಾನು ನಿಮ್ಮ ವಿಷಯದಲ್ಲಿ ಸಂತೋಷಪಡುತ್ತೇನೆ. ಆದರೆ ನೀವು ಒಳ್ಳೆಯದನ್ನು ಕುರಿತು ಜ್ಞಾನಿಗಳಾಗಿಯೂ ಕೆಟ್ಟವುಗಳನ್ನು ಕುರಿತು ನಿಷ್ಕಳಂಕರಾಗಿಯೂ ಇರಬೇಕೆಂದು ಅಪೇಕ್ಷಿಸುತ್ತೇನೆ.